ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದವಾಕ್ಯವಲ್ಲ: ಸಿಎಂ ಬೊಮ್ಮಾಯಿ ಕಿಡಿ

Published : Jul 30, 2022, 03:00 AM IST
ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದವಾಕ್ಯವಲ್ಲ: ಸಿಎಂ ಬೊಮ್ಮಾಯಿ ಕಿಡಿ

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದ ವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಆರ್‌.ಟಿ.ನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು.

ಬೆಂಗಳೂರು (ಜು.30): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದ ವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಆರ್‌.ಟಿ.ನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. 

ಆಗ ಅವರು ಏನು ಮಾಡುತ್ತಿದ್ದರು? ಎಲ್ಲಾ ವಿಷಯಗಳಲ್ಲಿ ರಾಜಕಾರಣ ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದು ತಿಳಿದರು. ಶಾಸಕ ತನ್ವೀರ್‌ ಸೇಠ್‌ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಯ ಸುಮಾರು 200 ಜನರು ದಾಳಿ ನಡೆಸಿದ್ದರು. ಆ ದಾಳಿಕೋರರನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನಃ ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದರು. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳಿಗೆ ಫಂಡಿಂಗ್‌ ಮಾಡುತ್ತಿರುವುದೇ ಬಿಜೆಪಿ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. 

ಜನೋತ್ಸವ ರದ್ದು: ನಾನು ಹೇಳಿದ ಮೇಲೆ ಸರ್ಕಾರಕ್ಕೆ ಜ್ಞಾನೋದಯವಾಗಿದೆ, ಕುಮಾರಸ್ವಾಮಿ

ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ. ಸರ್ಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ ಎಂದು ತಿಳಿಸಿದರು.

ದುಷ್ಕರ್ಮಿಗಳ ಸದೆಬಡಿಯುತ್ತೇವೆ: ಸಮಾಜದಲ್ಲಿ ಹಿಂಸೆ, ಕ್ಷೋಭೆಯನ್ನುಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಿಕೊಡುವ ಸಂದರ್ಭ ಬಂದರೆ ವಹಿಸಿಕೊಡಲು ಹಿಂಜರಿಯುವುದಿಲ್ಲ. ಘಟನೆ ಕುರಿತು ಕೇರಳ ಪೊಲೀಸರ ಜತೆ ರಾಜ್ಯದ ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ. ಆದಷ್ಟುಬೇಗ ಆರೋಪಿಗಳನ್ನು ಬಂಧಿಸಲಾಗುತ್ತದೆ’ ಎಂದು ತಿಳಿಸಿದರು.

ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ರದ್ದು: ಸಿಎಂ ಬೊಮ್ಮಾಯಿ

ಪೂರ್ವನಿಯೋಜಿತ ಕೊಲೆ ಶಂಕೆ: ‘ಮೇಲ್ನೋಟಕ್ಕೆ ಇದು ಪೂರ್ವನಿಯೋಜಿತ ಕೊಲೆ ಎನ್ನುವ ರೀತಿ ಕಾಣಿಸುತ್ತಿದೆ. ಬೇರೆ ಪ್ರಕರಣಗಳಿಗೆ ಇದರ ಹೊಂದಾಣಿಕೆ ಇದೆ. ಘಟನೆ ಕುರಿತು ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಮಂಗಳೂರು ಮತ್ತು ಕಾಸರಗೋಡು ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ ಮಾತನಾಡಲಾಗಿದೆ. ಕರ್ನಾಟಕ ಡಿಜಿಪಿ ಅವರು ಕೇರಳದ ಡಿಜಿಪಿಯವರೊಂದಿಗೆ ಮಾತನಾಡಿದ್ದಾರೆ. ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಲಾಗುವುದು’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!