ಸಿಎಂ ಬದಲಾವಣೆ ಚರ್ಚೆ ರಾಜಕೀಯ ಪ್ರೇರಿತ: ಬಸವರಾಜ ಬೊಮ್ಮಾಯಿ

Published : Aug 12, 2022, 05:00 AM IST
ಸಿಎಂ ಬದಲಾವಣೆ ಚರ್ಚೆ ರಾಜಕೀಯ ಪ್ರೇರಿತ: ಬಸವರಾಜ ಬೊಮ್ಮಾಯಿ

ಸಾರಾಂಶ

ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲವಾಗಿದ್ದು, ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಆ.12): ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲವಾಗಿದ್ದು, ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಗುರುವಾರ ಆರ್‌.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಆಧಾರ ರಹಿತ, ರಾಜಕೀಯ ಪ್ರೇರಿತ ಟ್ವೀಟ್‌ ಮೂಲಕ ಗೊಂದಲ ಸೃಷ್ಟಿಸಲು ಮುಂದಾಗಿದೆ. ಆದರೆ, ನಾನು ಸ್ಥಿತಪ್ರಜ್ಞನಾಗಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್‌ ಹೇಳಿಕೆಯಿಂದ ನನ್ನ ನಿರ್ಣಯಗಳು ಮತ್ತಷ್ಟುಗಟ್ಟಿಯಾಗಲಿವೆ. 2 ತಾಸು ಹೆಚ್ಚಿನ ಕೆಲಸ ಮಾಡಬೇಕು ಎನ್ನುವ ಪ್ರೇರಣೆ ಸಿಕ್ಕಂತಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್‌ ಈ ರೀತಿ ಟ್ವೀಟ್‌ ಮಾಡುತ್ತಿರುವುದು ಇದೇ ಮೊದಲ ಬಾರಿಯಲ್ಲ. ಕಾಂಗ್ರೆಸಿಗರ ಮನಸ್ಸಿನಲ್ಲಿ ಅತಂತ್ರವಿದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ನೆಡಬೇಕು ಎಂದು ಕೊಂಡಿದ್ದಾರೆ. ಆದರೆ, ರಾಜ್ಯದ ಜನ ಅದನ್ನು ನಂಬುವುದಿಲ್ಲ, ನಂಬುವ ಸ್ಥಿತಿಯಲ್ಲಿಯೂ ಇಲ್ಲ. ಇದೊಂದು ರಾಜಕೀಯ ಪ್ರೇರಿತ ಎಂಬುದು ನನಗೆ ಗೊತ್ತಿದೆ. ಇದರಿಂದಾಗಿ ಇನ್ನಷ್ಟುಹೆಚ್ಚಿನ ಕೆಲಸಗಳನ್ನು ಜನರಿಗೆ ರಾಜ್ಯಕ್ಕೆ ಮಾಡಬೇಕು ಎನ್ನುವ ಪ್ರೇರಣೆ ಉಂಟಾಗಿದೆ. ದಿನಕ್ಕೆ ಇನ್ನೂ ಎರಡು ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಮತ್ತು ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು’ ಎಂದರು.

ಸಿಎಂ ಬದಲಾವಣೆ ಕಪೋಲಕಲ್ಪಿತ: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವ್ಯಂಗ್ಯ

ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಕೇವಲ ಊಹಾಪೋಹ, ಕಾಂಗ್ರೆಸ್‌ನವರು ವಿನಾಕಾರಣ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು. ನಂದಗುಡಿ ಹೋಬಳಿಯ ಬೀರಹಳ್ಳಿ, ಬಂಡಹಳ್ಳಿ, ಕೊರಟಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಅವರ ನೇತೃತ್ವದಲ್ಲೆ 2023ರ ವಿಧಾನಸಭಾ ಚುನಾವಣೆ ನಡೆಯಲಿದೆ. 

ಸಿಎಂ ಬದಲಾವಣೆ ಎನ್ನುವ ವಿಚಾರ ಕೇವಲ ಕಾಂಗ್ರೆಸ್‌ ಪಕ್ಷದವರ ಊಹಾಪೋಹ ಮಾತು. ಆದ್ದರಿಂದ, ಬಿಜೆಪಿ ಕಾರ್ಯಕರ್ತರು ಹಾಗೂ ರಾಜ್ಯದ ಜನ ಊಹಾಪೋಹಕ್ಕೆ ಕಿವಿಗೊಡಬಾರದು. 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸ್ಪಷ್ಟಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಬಸವರಾಜ್‌ ಬೊಮ್ಮಾಯಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು. ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ದೃಷ್ಠಿಯಿಂದ ಅಗತ್ಯ ಅನುದಾನಗಳನ್ನು ನಿರಂತರ ಒದಗಿಸಿಕೊಡುತ್ತಿದ್ದು, ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ತಾಲೂಕಿನಲ್ಲಿ ನಂದಗುಡಿ ಹೋಬಳಿಯ ಎಲ್ಲ ಗ್ರಾಮಗಳಿಗೂ ಅಗತ್ಯ ಅನುದಾನ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ACB ರದ್ದು: ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಪಕ್ಷ ಸೇರ್ಪಡೆ: ಹೆತ್ತಕ್ಕಿ ಗ್ರಾಪಂ ವ್ಯಾಪ್ತಿಯ ಬಂಡಹಳ್ಳಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡ ಇಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರು ಸಚಿವ ಎಂಟಿಬಿ ನಾಗರಾಜ್‌ ಅವರ ನೇತೃತ್ವದದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡ ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಕಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ