ಬಿಜೆಪಿ ಜನಸ್ಪಂದನ ಸಮಾವೇಶ: ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಉದ್ಯೋಗ ನೀಡುವುದಾಗಿ ಘೋಷಿಸಿದ ಸಿಎಂ

By Ramesh B  |  First Published Sep 10, 2022, 3:43 PM IST

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಕಾಲದ ಹಗರಣಗಳನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟರು. 
 


ದೊಡ್ಡಬಳ್ಳಾಪುರ, (ಸೆಪ್ಟೆಂಬರ್. 10): ಕರ್ನಾಟಕ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಮುಂಬರು ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಿದೆ. ಇತ್ತೀಚೆಗೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಡೆಸಿದ ಅಮೃತಮಹೋತ್ಸವಕ್ಕೆ ಸೆಡ್ಡು ಹೊಡೆಯಲು ಹಾಗ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ದಾಖಲೆಯ ಸಂಖ್ಯೆಯಲ್ಲಿ ಸೇರಿದ್ದಕ್ಕೆ ನಿಮಗೆ ಅಭಿನಂದನೆ. ಇಲ್ಲಿಂದ ಇಡೀ ರಾಜ್ಯಕ್ಕೆ ಕೇಳಿಸುವಂತೆ ಸಂದೇಶ ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂಬ ಸಂದೇಶ ರವಾನೆ ಆಗಿದೆ. ನೀವು ಇಟ್ಟಿರುವ ವಿಶ್ವಾಸಕ್ಕೆ ನಾವು ದ್ರೋಹ ಮಾಡಲ್ಲ. 2019ರಲ್ಲೇ ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್‌ನ ಹುನ್ನಾರದಿಂದ ಅದು ಕೈತಪ್ಪಿತ್ತು. ಕಾಂಗ್ರೆಸ್​ನಿಂದ ಬಂದ ಎಲ್ಲ ಶಾಸಕರೂ ವೀರರು ಎಂದು ಹೇಳಿದರು.

Latest Videos

undefined

Doddaballapur: ಬಿಜೆಪಿ ಜನಸ್ಪಂದನ ಸಮಾವೇಶದ ವೇಳೆ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡು ಹಾಡಿದ ಸಚಿವ ಸುಧಾಕರ್

ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಉದ್ಯೋಗ
 ಇನ್ನು ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದು, ನನ್ನ (ಸಿಎಂ) ಕಚೇರಿಯಲ್ಲಿ ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ಘೋಷಣೆ ಮಾಡಿದರು.

ಬಿಜೆಪಿಗೆ ಕಾರ್ಯಕರ್ತರೇ ಜೀವಾಳ ...

ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರ್‌ ಅವರ ಮನೆಯವರಿಗೆ ತನ್ನ ಕಛೇರಿಯಲ್ಲಿ ಉದ್ಯೋಗ ನೀಡುವುದಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಅವರು ಘೋಷಿಸಿದ್ದಾರೆ. pic.twitter.com/dc2qcHIP1u

— BJP Karnataka (@BJP4Karnataka)

ಅಕ್ಕಿ ಮೋದಿದು, ಚೀಲ ಮಾತ್ರ ನಿಮ್ಮದು
ನಾವು ಸಮರ್ಥವಾಗಿ ಕೊವಿಡ್​ ಎದುರಿಸಿದ್ದೇವೆ. ಜನರಿಗೆ ಉಚಿತವಾಗಿ ಕೊವಿಡ್​ ಲಸಿಕೆ ನೀಡಿದ್ದೇವೆ. ಕಾಂಗ್ರೆಸ್‌​​ನವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅನ್ನಭಾಗ್ಯ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಚೀಲದಲ್ಲಿದ್ದ ಅಕ್ಕಿ ಮೋದಿದು, ಚೀಲ ಮಾತ್ರ ನಿಮ್ಮದು. ಅನ್ನಭಾಗ್ಯದಲ್ಲಿ ಅವ್ಯವಹಾರ ಆಯ್ತು. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ದಂಧೆ ಮಾಡಿದ್ರಿ. ಲ್ಯಾಪ್​ಟಾಪ್​ ಕೊಡುವುದರಲ್ಲಿ ಹಗರಣ ಮಾಡಿದ್ರಿ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸರ್ಕಾರಕ್ಕೆ ಪರ್ಸೆಂಟೇಜ್​ ಸರ್ಕಾರ ಎಂದು ಹೇಳುತ್ತೀರಿ. ನೀವು ಕೆಲಸ ಮಾಡದೇ ಬರೀ ಬಿಲ್​ ಪಡೆದ್ದೀರಿ. ನಿಮ್ಮದು 100% ಕಮಿಷನ್​ ಸರ್ಕಾರ ಎಂದು ನೀವು ನಮಗೆ ಹೇಳುತ್ತೀರಾ.ಬೋರ್‌ವೆಲ್‌ ಕೊರೆಸುವುದಕ್ಕೆ ಅನುಮತಿ ನೀಡಿ ಅದರಲ್ಲೂ ಅವ್ಯವಹಾರ ಮಾಡಿದ್ರೆ. ಎಸ್‌ಸಿ ಹಾಗೂ ಎಸ್‌ಟಿ ಹಾಸಿಗೆ ದಿಂಬು ಕೊಡುವುದರಲ್ಲೂ ಸ್ಕ್ಯಾಮ್ ಮಾಡಿದ್ರಿ. ನಿಮ್ಮ ನಾಟಕ ನಡೆಯುವುದಿಲ್ಲ, ಇದನ್ನ ಕೊನೆಗಾಣಿಸಬೇಕು. ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

ಶಕ್ತಿಇಲ್ಲದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ 
ಕೂಲಿಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ನೀಡಿದ್ದೇವೆ. ಶಕ್ತಿಇಲ್ಲದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ನೀಡಿದ್ದೇವೆ. ಹಾಲು ಉತ್ಪಾದಕರಿಗೆ ಒಂದು ಬ್ಯಾಂಕ್​ ಸ್ಥಾಪಿಸುತ್ತಿದ್ದೇವೆ. ಕೋಲಾರ-ಚಿಕ್ಕಬಳ್ಳಾಪುರ ಜನರಿಗೆ ಹೆಚ್ಚು ಲಾಭವಾಗಲಿದೆ. SC, ST ವಿದ್ಯಾರ್ಥಿಗಳ ಹಾಸ್ಟೆಲ್​ ಹೆಚ್ಚಳ ಮಾಡಿದ್ದೇವೆ. ಸ್ತ್ರಿಶಕ್ತಿ ಸಂಘಗಳ 5 ಲಕ್ಷ ಸದಸ್ಯರಿಗೆ ಉದ್ಯೋಗ ನೀಡ್ತೇವೆ. ನೀರಾವರಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ಎತ್ತಿನಹೊಳೆ ಯೋಜನೆಯನ್ನ ನಾವು ಆರಂಭಿಸಿದ್ದೇವೆ. ವರಿಗೆ ಎತ್ತಿನಹೊಳೆ ಯೋಜನೆ ಬಗ್ಗೆ ಏನೂ ಗೊತ್ತಿಲ್ಲ. ಇದೇ ವರ್ಷ ಎತ್ತಿನಹೊಳೆ ನೀರನ್ನ ಹರಿಸುತ್ತೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಟೌನ್​ಶಿಪ್​ ಬಗ್ಗೆ ಚಿಂತನೆ ನಡೆದಿದೆ. ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇವೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಗುರಿ ಹೊಂದಿದ್ದೇವೆ ಎಂದು ಹೇಳಿದರು.
 

click me!