ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿ ಕನಸು ನನಸಾಗುವ ಕಾಲ ಬಂದಿದೆ: ಸಿಎಂ ಬೊಮ್ಮಾಯಿ

Published : Oct 25, 2022, 01:30 AM IST
ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿ ಕನಸು ನನಸಾಗುವ ಕಾಲ ಬಂದಿದೆ: ಸಿಎಂ ಬೊಮ್ಮಾಯಿ

ಸಾರಾಂಶ

ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಕಂಡ ಕನಸುಗಳನ್ನು ಪೂರ್ತಿ ಮಾಡುವ ದಿನಗಳು ಬಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಶ್ರೀಮತಿ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ 

ಶಿಗ್ಗಾಂವಿ (ಅ.25): ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಕಂಡ ಕನಸುಗಳನ್ನು ಪೂರ್ತಿ ಮಾಡುವ ದಿನಗಳು ಬಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಶ್ರೀಮತಿ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕೆಲಸವೇ ಮಾತನಾಡಲಿದೆ: ಈ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ವಿದ್ಯುತ್, ಮನೆಗಳು ಜೊತೆಗೆ ಕೈಗಾರಿಕೆ, ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ದಿನಗಳು ಬಂದಿವೆ. ಬರುವ ದಿನಗಳಲ್ಲಿ ತಾವು ಇದರ ಲಾಭ ಪಡೆಯುವಿರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಿಮ್ಮ ಮತದಲ್ಲಿ ಎಷ್ಟೊಂದು ಶಕ್ತಿ ಇದೆಯೆಂದರೆ, ಆ ಮೂಲಕ ಶಾಸಕ, ಸಚಿವ ಹಾಗೂ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಈ ಶಕ್ತಿಯ ಲಾಭ ತಾಲೂಕಿಗೆ ಆಗಬೇಕಾಗಿದೆ. ಈ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ದೊಡ್ಡ ಪ್ರಮಾಣದ ಬದಲಾವಣೆ ತಾಲ್ಲೂಕಿನಲ್ಲಿ ಆಗಲಿದೆ. ನಾನು ಮಾತನಾಡುವುದಿಲ್ಲ. ನನ್ನ ಕೆಲಸಗಳು ಮಾತನಾಡುತ್ತವೆ  ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸಗಳು ಮಾತನಾಡಲಿವೆ ಎಂದು ನುಡಿದರು. ರಾಗ ದ್ವೇಷ, ಬಡವ ಬಲ್ಲಿದ ಎನ್ನದೆ ತಾವು ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು. 

1.7 ಲಕ್ಷ ಕೋಟಿ ಯೋಜನೆಗೆ ಅಸ್ತು: ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿ ಅನುಮೋದನೆ

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ: ಎಸ್‌ಸಿ, ಎಸ್‌ಟಿ ಮಹಿಳೆಯರು ಮತ್ತು ಯುವಕರಿಗಾಗಿ ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇವರಿಗೆ ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಇವುಗಳು ಪ್ರಮುಖವಾಗಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ.  ನಿಮ್ಮ ಪ್ರೀತಿ ವಿಶ್ವಾಸ ಸದಾ ಕಾಲ ಇರಬೇಕು. ಹೆಣ್ಣುಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳನ್ನು ಡಿಸೆಂಬರ್ ಮಾಹೆಯಲ್ಲಿ ಪ್ರಾರಂಭಿಸಲಾಗುವುದು.  ಮಹಿಳೆಯರಿಗೆ ಉದ್ಯೋಗ ನೀಡಿ, ಆರ್ಥಿಕ ಸ್ವಾವಲಂಬನೆಗೆ ದಾರಿ ಮಾಡಲಾಗುವುದು, ರೈತ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ ಎಂದರು.

ಶತಮಾನ ಕಳೆದರೂ ಕೆಂಪೇಗೌಡ ಅಜರಾಮರ: ಸಿಎಂ ಬೊಮ್ಮಾಯಿ

ರಾಜ್ಯದ ಪ್ರಗತಿಗಾಗಿ ಇನ್ನೂ ಹೆಚ್ಚು ದುಡಿಯಲು ಪ್ರೇರಣೆ ದೊರೆತಿದೆ: ಬ್ರಿಟೀಷ್ ಸೈನ್ಯವನ್ನು ಸೋಲಿಸಿ ಥ್ಯಾಕರೆಯನ್ನು ಕೊಂದಂತಹ ದಿನ. ಇಂದು ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ಸಲ್ಲಿಸುವ ದಿನ. ಚೆನ್ನಮ್ಮನ ಶೌರ್ಯವನ್ನು ರಾಜ್ಯದ ಪ್ರಗತಿಯಲ್ಲಿ ತೋರಬೇಕಿದೆ. ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆಯಾಗಿದ್ದಾರೆ. ಇಂತಹ ಪವಿತ್ರ ನಾಡಿನಲ್ಲಿ ನಾವಿದ್ದೇವೆ.  ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಈ ಕಾರ್ಯಕ್ರಮದಿಂದ ಅದಮ್ಯವಾದ ಶಕ್ತಿ ನನಗೆ ದೊರೆತಿದೆ. ಮೊದಲು 14 –15 ಗಂಟೆಗಳು ಕೆಲಸ ಮಾಡುತ್ತಿದ್ದು, ರಾಜ್ಯದ ಪ್ರಗತಿಗಾಗಿ  ಇನ್ನೂ ಹೆಚ್ಚು ದುಡಿಯಲು ಹೆಚ್ಚಿನ ಪ್ರೇರಣೆ ದೊರೆತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!