ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜು.24ರಿಂದ 3 ದಿನ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜು.28ಕ್ಕೆ ಅವರ ಸರ್ಕಾರ 1 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ದಿಲ್ಲಿ ಭೇಟಿ ಮಹತ್ವ ಪಡೆದುಕೊಂಡಿದೆ.
ಬೆಂಗಳೂರು (ಜು.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜು.24ರಿಂದ 3 ದಿನ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜು.28ಕ್ಕೆ ಅವರ ಸರ್ಕಾರ 1 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ದಿಲ್ಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಅವರು ಈ ವೇಳೆ, ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ವರಿಷ್ಠರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಒಳಗೊಂಡ ವರದಿಯನ್ನು ನೀಡುವ ಸಂಭವವಿದೆ. ಜತೆಗೆ ಸಂಪುಟ ವಿಸ್ತರಣೆ ಬಗ್ಗೆಯೂ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ನಿಗಮ, ಮಂಡಳಿ ನೇಮಕ ತಡ?: ರಾಜ್ಯ ಸರ್ಕಾರದ ಸುಮಾರು 50ಕ್ಕೂ ಹೆಚ್ಚು ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರಿಗೆ ಗೇಟ್‌ಪಾಸ್ ನೀಡಿದ್ದರೂ ಹೊಸಬರ ಪಟ್ಟಿಬಿಡುಗಡೆ ಯಾವಾಗ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದೇ ತಿಂಗಳ 28ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಹಾಗೂ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ಬೃಹತ್ ಸಮಾರಂಭ ಆಯೋಜಿಸಲಾಗಿದೆ. ಆ ಸಮಾರಂಭದ ಬಳಿಕ ಪಟ್ಟಿಬಿಡುಗಡೆ ಮಾಡುವುದು ಸೂಕ್ತ ಎಂಬ ಚಿಂತನೆ ನಡೆದಿದೆ.
ವಿದ್ಯುತ್ ಸಂಪರ್ಕ ಕಿರಿಕಿರಿಗೆ ಶೀಘ್ರ ಮುಕ್ತಿ: ಸಿಎಂ ಬೊಮ್ಮಾಯಿ ಭರವಸೆ
ಈ ನಡುವೆ ಒಂದು ಪಟ್ಟಿಯನ್ನು ಇನ್ನೆರಡು ದಿನಗಳಲ್ಲೇ ಬಿಡುಗಡೆ ಮಾಡಲಾಗುವುದು. ಉಳಿದವರ ಪಟ್ಟಿಯನ್ನು ಈ ತಿಂಗಳ 28ರ ಬಳಿಕ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಕಳೆದ ವಾರ 50ಕ್ಕೂ ಹೆಚ್ಚು ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮರುದಿನವೇ ಪಟ್ಟಿಬಿಡುಗಡೆ ಆಗಲಿದೆ ಎಂಬ ಮಾತನ್ನು ಬಿಜೆಪಿ ನಾಯಕರು ಆಗ ಹೇಳುತ್ತಿದ್ದರೂ ಅನುಷ್ಠಾನಕ್ಕೆ ಬರಲಿಲ್ಲ.
ವಿದ್ಯುತ್ ಸಂಪರ್ಕ ಕಿರಿಕಿರಿಗೆ ಶೀಘ್ರ ಮುಕ್ತಿ: ಬಡವರು ಮನೆ ನಿರ್ಮಿಸಿದರೆ ವಿದ್ಯುತ್ ಸಂಪರ್ಕ ಬೇಗ ಸಿಗುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಅರ್ಜಿ ಹಾಕಿದ ಎಲ್ಲರಿಗೂ ಕಿರಿಕಿರಿ ಉಂಟು ಮಾಡದೆ ವಿದ್ಯುತ್ ಸಂಪರ್ಕ ನೀಡಲು ಶೀಘ್ರವೇ ನಿಯಮಗಳನ್ನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನಿಡಿದರು.
ಈ ಸಲ ಅದ್ಧೂರಿಯಾಗಿ ದಸರಾ ಮಹೋತ್ಸವ: ಸರ್ಕಾರದ ನಿರ್ಧಾರ
ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ನಿಗಮದ 53ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನೀರಿನ ಹಾಗೆಯೇ ವಿದ್ಯುತ್ ಸಹ ಜನರ ಹಕ್ಕು. ಬಡವರು ಮನೆ ಕಟ್ಟಿದರೆ ಬೇಗ ವಿದ್ಯುತ್ ಸಂಪರ್ಕ ಸಿಗುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ನಿವಾರಿಸಲು, ರಾಜ್ಯದ ಯಾವುದೇ ಭಾಗದಲ್ಲಿರುವ ವ್ಯಕ್ತಿ ಮನೆ ನಿರ್ಮಿಸಿಕೊಂಡು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದರೆ ತಕ್ಷಣ ಸಂಪರ್ಕ ಕಲ್ಪಿಸಲು ಆದೇಶ ಹೊರಡಿಸಲಾಗುವುದು ಎಂದು ಸ್ಪಷ್ಪಡಿಸಿದರು.