
ಬೆಂಗಳೂರು(ಮೇ.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತಂತೆ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಲು ಉದ್ದೇಶಿಸಿದ್ದಾರೆ. ದಾವೋಸ್‌ಗೆ ಭಾನುವಾರ ತೆರಳುವ ಹಿನ್ನೆಲೆಯಲ್ಲಿ ಶುಕ್ರವಾರ ಶುಕ್ರವಾರ ತಾವಾಗಿಯೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲು ಸಿಎಂ ನಿರ್ಧರಿಸಿದರು ಎಂಬ ಮಾತು ಕೇಳಿಬಂದಿದೆ. ಮತ್ತೊಂದೆಡೆ ಪಕ್ಷದ ವರಿಷ್ಠರೇ ಬೊಮ್ಮಾಯಿ ಅವರನ್ನು ಅಭ್ಯರ್ಥಿ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕರೆಸಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.
ಜೋಶಿ ಜತೆ ಭೇಟಿ:
ಶುಕ್ರವಾರ ದೆಹಲಿಗೆ ತೆರಳಿದ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತ್ತು ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಪೈಕಿ ವಿಧಾನಸಭೆಯ ಪಕ್ಷದ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ರಾಜ್ಯಸಭೆಯ ಎರಡು ಸ್ಥಾನ ಮತ್ತು ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳು ಲಭ್ಯವಾಗಲಿವೆ. ಈ ಸಂಬಂಧ ಈಗಾಗಲೇ ಪಕ್ಷದ ರಾಜ್ಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೇಂದ್ರ ಘಟಕಕ್ಕೆ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ರಾಜ್ಯಸಭೆಯ ಎರಡು ಸ್ಥಾನಗಳಿಗೆ ಐದು ಹೆಸರುಗಳು ಮತ್ತು ವಿಧಾನಪರಿಷತ್ತಿನ ನಾಲ್ಕು ಸ್ತಾನಗಳಿಗೆ 20 ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸಲಾಗಿದೆ. ಅವುಗಳಲ್ಲಿ ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಆ ತೀರ್ಮಾನಕ್ಕೂ ಮೊದಲು ಮುಖ್ಯಮಂತ್ರಿಗಳೊಂದಿಗೆ ವರಿಷ್ಠರು ಚರ್ಚಿಸಲಿದ್ದಾರೆ ಎನ್ನಲಾಗಿದೆ.
MLC Election: 26ಕ್ಕೆ ಸಿಎಂ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ: ಹೊರಟ್ಟಿ
ಇದೇ ವೇಳೆ ರಾಜ್ಯಸಭೆಯ ನಾಲ್ಕನೇ ಸ್ಥಾನವನ್ನು ಯಾವುದೇ ಪಕ್ಷಕ್ಕೂ ಸ್ವಂತ ಬಲದ ಆಧಾರದ ಮೇಲೆ ಗೆಲ್ಲುವುದು ಸಾಧ್ಯವಿಲ್ಲದ ಸನ್ನಿವೇಶ ಎದುರಾಗಿರುವುದರಿಂದ ಜೆಡಿಎಸ್‌ನ ನೇರ ಅಥವಾ ಪರೋಕ್ಷ ಬೆಂಬಲದೊಂದಿಗೆ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಬಗ್ಗೆಯೂ ವರಿಷ್ಠರು ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.