ಮತ್ತೆ ದಿಲ್ಲಿಗೆ ಹಾರಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ

Published : May 10, 2022, 11:09 AM ISTUpdated : May 10, 2022, 11:10 AM IST
ಮತ್ತೆ ದಿಲ್ಲಿಗೆ ಹಾರಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ

ಸಾರಾಂಶ

* ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ * ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ * ಮತ್ತೆ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಬೆಂಗಳೂರು, (ಮೇ.10): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಮಂಗಳವಾರ) ದೆಹಲಿಗೆ ತೆರಳಿದ್ದಾರೆ. ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಮ್ಮ ಆರ್ ಟಿನಗರ ನಿವಾಸದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಸಿಎಂ ಅವರು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ಹೋಗುವ ಮೊದಲು ಸಿಎಂ ಮನೆಗೆ ಕೋಟಾ ಶ್ರೀನಿವಾಸ ಪೂಜಾರಿ, ಅರವಿಂದ್ ಬೆಲ್ಲದ್, ಹರತಾಳು ಹಾಲಪ್ಪ ಮೊದಲಾದವರು ಆಗಮಿಸಿ  ಮಾತುಕತೆ ನಡೆಸಿದರು.

ಮಂಗಳವಾರ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ನಾಳೆ (ಬುಧವಾರ) ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಾಧ್ಯವಾದ್ರೆ ದೆಹಲಿಯಲ್ಲಿ ಕೇಂದ್ರ ನಾಯಕರನ್ನ ಭೇಟಿ ಮಾಡಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ತೆಗೆದುಕೊಂಡು ಬರುವ ಸಾಧ್ಯತೆಗಳಿವೆ.

3 ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಂದ ಯಡಿಯೂರಪ್ಪ

ಮೇ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಪುನಾರಚನೆ ಕುರಿತು ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರ್ನಾಲ್ಕು ದಿನಗಳಲ್ಲಿ ಸಂಪುಟ ಪುನಾರಚನೆಯಾಗುವ ವಿಶ್ವಾಸ ಇದೆ ಎಂಬ ಮಾತುಗಳನ್ನು ಆಡಿದ್ದಾರೆ. ಇದು ಸಂಪುಟ ಪುನಾರಚನೆಗೆ ಮತ್ತಷ್ಟು ಪುಷ್ಠಿ ನೀಡಿದ್ದು, ಈ ಬಾರಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ.

ಒಂದು ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಈ ಬಾರಿಯ ಸಿಎಂ ದೆಹಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಜೂನ್‌ನಲ್ಲಿ ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ. ಬಿಜೆಪಿ ಬಲವರ್ಧನೆಗೆ ಮಂಡ್ಯದಲ್ಲಿ ಬೃಹತ್‌ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಜಿ ಸಚಿವ ಸಿಪಿ ಯೋಗೀಶ್ವರ್‌ ಹೇಳಿದ್ದಾರೆ.

ಮಂಡ್ಯದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಮತ್ತಷ್ಟು ಬಲವರ್ಧನೆಗೆ ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಮಂಡ್ಯದಲ್ಲಿ ಮುಂದಿನ ತಿಂಗಳು ಬಿಜೆಪಿ ರಾಷ್ಟ್ರೀಯ ನಾಯಕರಿಂದ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಕಮಲ ಅರಳಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!