ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಉತ್ತರ ನೀಡಲೇಬೇಕೆಂದು ಕಾಂಗ್ರೆಸ್ ಸಜ್ಜಾಗಿದೆ. ಇದರಿಂದ ಸಿಎಂ ಬೊಮ್ಮಾಯಿ ಸಿದ್ದು ತವರು ಜಿಲ್ಲೆಗೆ ಆಗಮಿಸಲು ಹಿಂದೇಟು ಹಾಕಿದ್ದಾರೆ.
ಮೈಸೂರು, (ಆ.21): ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ರಾಜಕೀಯ ನಾಯಕ ಆರೋಪ-ಪ್ರತ್ಯಾರೋಪ ಜೋರಾಗಿದ್ದು, ಇದೀಗ ಬಿಜೆಪಿ ನಾಯಕರಿಗೂ ಸಹ ಪ್ರತಿಭಟನೆ ಬಿಸಿ ಚಿಂತೆ ಕಾಡತೊಡಗಿದೆ.
ಹೌದು..ತಮ್ಮ ನಾಯಕನ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ಯನೊಬ್ಬ ಮೊಟ್ಟೆ ಎಸೆದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಇದಕ್ಕೆ ಪ್ರತೀಕಾರ ನೀಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಪ್ರವಾಸವನ್ನು ದಿಢೀರ್ ರದ್ದು ಮಾಡಿದ್ದಾರೆ.
ಸಿದ್ದು ಕಾರಿಗೆ ಮೊಟ್ಟೆ ಎಸೆದ ಯುವಕ ಯಾರು? ಪಕ್ಷಗಳಲ್ಲಿ ನಮ್ಮವನಲ್ಲ ಫೈಟ್!
ಸಿದ್ದು ತವರೂರಿಗೆ ಆಗಮಿಸಲು ಸಿಎಂ ಹಿಂದೇಟು?
ಯೆಸ್...ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಮೊಟ್ಟೆ ಎಸೆದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಬೀದಿಗಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅದರಲ್ಲೂ ಸಿದ್ದು ತವರು ಜಿಲ್ಲೆ ಮೈಸೂರಿನಲ್ಲಿ ಆಕ್ರೋಶದ ಕಿಚ್ಚು ಹೆಚ್ಚಾಗಿದೆ. ಇದರಿಂದ ಸಿಎಂ ಬೊಮ್ಮಾಯಿ ಅವರು ಇಂದು(ಭಾನುವಾರ) ಮೈಸೂರು ಜಿಲ್ಲಾ ಪ್ರವಾಸವನ್ನು ರದ್ದು ಮಾಡಿ ಧಾರವಾಡ ಜಿಲ್ಲೆ ಕಡೆ ಮುಖಮಾಡಿದ್ದಾರೆ.
ಬಸವರಾಜ ಬೊಮ್ಮಾಯಿ.ಇಂದು ಮೈಸೂರು ಜಿಲ್ಲೆಯ ಮೂಗೂರು ದೇವಾಲಯಕ್ಕೆ ಆಗಮಿಸಬೇಕಿತ್ತು. ಆದ್ರೆ, ಮೈಸೂರು ಸಿದ್ದರಾಮಯ್ಯ ತವರೂರು ಆದ ಕಾರಣ.
ಸಿಎಂ ಮೈಸೂರಿಗೆ ಆಗಮಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗುಡಾಯಿಸುವ ಸಾಧ್ಯತೆ ಇದೆ. ಇದನ್ನರಿತ ಸಿಎಂ ಬೊಮ್ಮಾಯಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ..
ನಿನ್ನೆ(ಶನಿವಾರ) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಲು ನುಗ್ಗಿದ್ದರು. ಇದರಿಂದ ಸಿಎಂ ಬೊಮ್ಮಾಯಿ ಪ್ರತಿಭಟನೆ ಬಿಸಿಯಿಂದ ತಪ್ಪಿಸಿಕೊಳ್ಳಲು ಮೈಸೂರು ಪ್ರವಾಸ ಕ್ಯಾನ್ಸಲ್ ಮಾಡಿದ್ದಾರೆ.
ಮಡಿಕೇರಿಗೆ ಪಾದಯಾತ್ರೆ
ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಗೆ ಮೊಟ್ಟೆ ಹೊಡೆದ ಹಿನ್ನೆಲೆ ಮೈಸೂರಿನಿಂದ 23ರಂದು ಪಾದಯಾತ್ರೆ ಹೊರಡಲು ಸಿದ್ದು ಫ್ಯಾನ್ಸ್ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಯಲ್ಲಿ ರೂಪುರೆಷೆ ರಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನೇ ಸೇರಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿಯಿಂದ ಪಾದಯಾತ್ರೆ ಹೊರಡಲಿರುವ ಪದಾಧಿಕಾರಿಗಳು, ಮೊದಲಿಗೆ ಮಾಜಿ ಸಿಎಂ ದಿ, ಡಿ ದೇವರಾಜ ಅರಸ್ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ.ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಎಸ್ ಶಿವರಾಮ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ.
ಘಟನೆ ಹಿನ್ನೆಲೆ
ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಆಗಸ್ಟ 18 ರಂದು ಮಲೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತರಳುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.
ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತ ಸಂಪತ್ ಎಂದು ತಿಳಿದುಬಂದಿದೆ. ಇನ್ನು ಈ ಸಂಪತ್ ಶಾಸಕ ಅಪ್ಪಚ್ಚು ರಂಜನ್ ಜೊತೆ ಇರುವ ಫೋಟೋಗಳು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ