ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಧುನಿಕ ಶಕುನಿ. ಮೀಸಲಾತಿ ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಮಾ.28) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಧುನಿಕ ಶಕುನಿ. ಮೀಸಲಾತಿ ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿ(Bengaluru)ನಲ್ಲಿ ಸೋಮವಾರ ಬಿ.ಎಸ್.ಯಡಿಯೂರಪ್ಪ(BS Yadiyurappa)ಅವರ ನಿವಾಸದ ಮೇಲೆ ಕಲ್ಲುತೂರಾಟ ನಡೆದಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರ, ಒಳ ಮೀಸಲಾತಿ ಗೊಂದಲ ಸೃಷ್ಟಿಸುವ ಜತೆಗೆ ಬಿಜೆಪಿ(BJP)ಯವರೇ ಬಿ.ಎಸ್.ಯಡಿಯೂರಪ್ಪ(BS Yadiyurappa) ಮನೆಗೆ ಕಲ್ಲು ಹೊಡೆಯಲು ಕಳುಹಿಸಿದ್ದಾರೆ ಎಂದು ದೂರಿದರು.
ಏ.5ರಂದು ಕೋಲಾರಕ್ಕೆ ರಾಹುಲ್ ಗಾಂಧಿ ಭೇಟಿ: ಅನರ್ಹತೆ ಬಗ್ಗೆ ಇಲ್ಲಿಂದಲೇ ಉತ್ತರ
ಬೊಮ್ಮಾಯಿ(Basavaraj Bommai) ಸರ್ಕಾರ ಚುನಾವಣೆ ಲಾಭಕ್ಕಾಗಿ ಜನರನ್ನು ಒಡೆಯಲು ತರಾತುರಿಯಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮೀಸಲಾತಿ ಪರಿಷ್ಕರಣೆ ಮಾಡಿದೆ. ಇದೆಲ್ಲವನ್ನೂ ಬೊಮ್ಮಾಯಿ ಮಾಡಿದ್ದರೆ ಯಡಿಯೂರಪ್ಪ ಅವರ ಮನೆ ಮೇಲೆ ಯಾಕೆ ದಾಳಿ ನಡೆದಿದೆ? ಅವರು ಅಧಿಕಾರದಲ್ಲೂ ಇಲ್ಲ. ಹೀಗಾಗಿ ಬಿಜೆಪಿಯವರೇ ಯಾರೋ ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳುಹಿಸಿರಬೇಕು ಎಂದು ಆರೋಪ ಮಾಡಿದರು.
ಬಿಜೆಪಿ ಶಾಸಕ ಎನ್‌ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ?
ಬೆಂಗಳೂರು (ಮಾ.28) : ಹಿರಿಯ ರಾಜಕಾರಣಿ, ಕೂಡ್ಲಗಿಯ ಬಿಜೆಪಿ ಹಾಲಿ ಶಾಸಕ ಎನ್.ವೈ. ಗೋಪಾಲಕೃಷ್ಣ(NY Gopalakrishna) ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಮೊಳಕಾಲ್ಮೂರು, ಬಳ್ಳಾರಿ ಹಾಗೂ ಕೂಡ್ಲಗಿಯಿಂದ ಆರು ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಪ್ರಸ್ತುತ ಕೂಡ್ಲಗಿಯಿಂದ ಶಾಸಕರಾಗಿದ್ದಾರೆ.
ಗೋಪಾಲಕೃಷ್ಣ ಅವರು ಸೋಮವಾರ ರಾತ್ರಿ ರಾಜಾನುಕುಂಟೆ ಸಮೀಪದ ರೆಸಾರ್ಚ್ ಒಂದರಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದರು.
ರಾಹುಲ್‌ಗೆ ಬೆಂಬಲಿಸಲು ವಿಪಕ್ಷಗಳ ಎಲ್ಲಾ ಸಂಸದರೂ ರಾಜೀನಾಮೆ ನೀಡಿ: ಆರ್‌ಜೆಡಿ ನಾಯಕನ ಸಲಹೆ!
ಎಐಸಿಸಿ ಪರಿಶೀಲನಾ ಸಮಿತಿ ಸಭೆ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುರ್ಮಾ, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ. ಈ ವೇಳೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನೂ ಚರ್ಚಿಸಿದ್ದು ಸದ್ಯದಲ್ಲೇ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.