ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

By Suvarna NewsFirst Published Dec 20, 2020, 4:32 PM IST
Highlights

ಇತ್ತೀಚಿನ ದಿನಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಪಕ್ಷದತ್ತ ಹೆಚ್ಚಿನ ಒಲವು ತೋರಿಸುತ್ತಿರುವ ಕಾರಣ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಸುದ್ದಿಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು, (ಡಿ.20): ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ವಿಲೀನವಾಗುತ್ತಾ ಎನ್ನುವ ಚರ್ಚೆಗಳು ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. 

ಇನ್ನು ಈ ಬಗ್ಗೆ ಬಿಜೆಪಿ ಉಪಾಧ್ಯಕ್ಷ ಅರವಿಂದ್ ಲಿಂಬಾವಳಿ ಸಹ ಸುಳಿವು ಕೊಟ್ಟಿದ್ದಾರೆ. ಆದ್ರೆ, ಇದೀಗ ಇದಕ್ಕೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು  ಮಾಧ್ಯಮ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

BJP ಜೊತೆಗೆ ಜೆಡಿಎಸ್ ವಿಲೀನವಾಗುತ್ತಾ? ಬಿಜೆಪಿ ಉಪಾಧ್ಯಕ್ಷ ಸ್ಫೋಟಕ ಸುಳಿವು

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಬಿಎಸ್ ವೈ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರಷ್ಟೇ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.

ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ಕುಮಾರಸ್ವಾಮಿಯವರು ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದಾರೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ವಿಲೀನದ ಬಗೆಗಿನ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಕೇಳಿಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

click me!