ಡಿನ್ನರ್ ಪಾರ್ಟಿ ಆಯೋಜಿಸಿದ ಸಿಎಂ: ಕುತೂಹಲ ಮೂಡಿಸಿದ ಬಿಎಸ್‌ವೈ ನಡೆ

Published : Feb 01, 2021, 07:31 PM ISTUpdated : Feb 01, 2021, 07:39 PM IST
ಡಿನ್ನರ್ ಪಾರ್ಟಿ ಆಯೋಜಿಸಿದ ಸಿಎಂ: ಕುತೂಹಲ ಮೂಡಿಸಿದ ಬಿಎಸ್‌ವೈ ನಡೆ

ಸಾರಾಂಶ

ಬೇರೆ-ಬೇರೆ ಕಾರಣಗಳಿಂದ ಅಸಮಾಧಾನಗೊಂಡಿರುವ ಶಾಸರು ಹಾಗೂ ಸಚಿವರುಗಳನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. 

ಬೆಂಗಳೂರು, (ಫೆ.01): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ  ಔತಣಕೂಟ ಏರ್ಪಡಿಸಿದ್ದಾರೆ.

ನಾಳೆ ಅಂದ್ರೆ ಮಂಗಳವಾರ (ಫೆ.02) ತಮ್ಮ ಸರ್ಕಾರಿ‌ ನಿವಾಸದಲ್ಲಿ ಸಿಎಂ, ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ ಸಿಎಂ ನಿವಾಸದಲ್ಲಿ  ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಕುತೂಹಲ ಮೂಡಿಸಿದೆ.

ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಡಿನ್ನರ್ ಪಾರ್ಟಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಕೆಲವರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ ಅಂತ ಅಸಮಾಧಾನಗೊಂಡಿದ್ದಾರೆ. ಇನ್ನು ಕೆಲವರು ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದಾರೆ. ಅಲ್ಲದೇ ಖಾತೆ ಹಂಚಿಕೆ ಬಗ್ಗೆಯೂ ಸಿಎಂ ಮೇಲೆ ಬೇಸರಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಔತಣಕೂಟದ ಮೂಲಕ ಎಲ್ಲರನ್ನೂ ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ  ಮುಂದೆ ರಾಜ್ಯ ಬಿಜೆಟ್ ಇರುವುದರಿಂದ ಎಲ್ಲರನ್ನು ಗಣನೆಗೆ ತೆಗೆದುಕೊಳ್ಳಲು ಈ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ