
ರಾಯಚೂರು(ಮಾ.21): ಮಸ್ಕಿ ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಶನಿವಾರ ರಾತ್ರಿ ಮಸ್ಕಿ ಪ್ರಚಾರ ಸಮಾವೇಶ ಬಳಿಕ ಜಿಲ್ಲೆಯ ಸಿಂಧನೂರಿನಲ್ಲಿ ವಾಸ್ತವ್ಯ ಉಳಿದಿದ್ದ ಸಿಎಂ ಇಂದು(ಭಾನುವಾರ) ಬೆಳಿಗ್ಗೆ ಕೆ.ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಉಪಹಾರ ಸೇವನೆಗೆ ಬಂದಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಸ್ಕಿ ಉಪಚುನಾವಣೆ ರಣಕಹಳೆ: ಮೋದಿ ಅಭಿವೃದ್ಧಿ ನೆನೆದು ಮತ ನೀಡಿ, ಯಡಿಯೂರಪ್ಪ
ಮೈಸೂರಿನಲ್ಲಿಯೇ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡಲಿದ್ದಾರೆ. ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಬಳಿಕ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಸಿಎಂ ಬಿ.ಎಸ್ವೈ ದರ್ಶನವನ್ನ ಪಡೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.