
ಬೆಂಗಳೂರು, (ಏ.28): ಹಸಿವಿನಿಂದ ಜನ ಸಾಯಬೇಕಾ ಎಂದು ರೈತರೊಬ್ಬರು ಕೇಳಿದ ಪ್ರಶ್ನೆಗೆ ಸಾಯಲಿ ಎನ್ನುವ ಮೂಲಕ ಸಚಿವ ಉಮೇಶ್ ಕತ್ತಿ ಉಡಾಫೆ ಹೇಳಿಕೆಗೆ ಸಿಎಂ ಬಿಎಸ್ ಯಡಿಯೂರಪ್ಪ ವಿಷಾದ ವ್ತಕ್ತಪಡಿಸಿದ್ದಾರೆ.
"
ಸಚಿವ ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಸಾಯಬೇಕೇ ಬದುಕಬೇಕೇ ಎಂದು ಕೇಳಿದ್ದಕ್ಕೆ ಸಾಯಿ ಎಂದು ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ.ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು. ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತು ಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!
ಕೊರೋನಾ ಸಂಕಷ್ಟದಲ್ಲೂ ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯುವುದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದು ವೈರಲ್ ಆಗಿದೆ.
ಅಕ್ಕಿ ಕಡಿತಗೊಳಿಸಿದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಉತ್ತರಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡುತ್ತೇವೆ. ಲಾಕ್ ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ.ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಬೆಳಗಾವಿಯಲ್ಲಿ ಹೇಳಿದಾಗ ಅಲ್ಲಿವರೆಗೆ ಉಪವಾಸ ಒರೋದಾ ಇಲ್ಲಾ ಸತ್ತು ಹೋಗೋದ ಎಂದು ರೈತ ಕೇಳಿದ್ದಾರೆ.
ಆಗ ಸಚಿವರರು ಸತ್ತು ಹೋದರೆ ಒಳ್ಳೆಯದು. ಅದಕ್ಕಿಂದ ಅಕ್ಕಿ ಮಾರೋದು ಅಲ್ಲೇ ಬಂದ್ ಮಾಡಿಬಿಡಿ. ಇಡಿ ನಮಗೆ ಫೋನ್ ಮಾಡಬೇಡಿ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.