ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದ ಕುಮಾರಸ್ವಾಮಿಗೆ ಬಿಎಸ್‌ವೈ ಅಭಿನಂದನೆ

By Web Desk  |  First Published Oct 28, 2019, 3:47 PM IST

ಸರ್ಕಾರವನ್ನು ಬೀಳಸಲು ಬಿಡಲ್ಲ ಎಂದಿದ್ದ ಕುಮಾರಸ್ವಾಮಿ ಮಾತಿಗೆ ಮುಖ್ಯಮಂತ್ರಿ ಬಿ.ಎಸ್.ಯಿಡಯೂರಪ್ಪ ಅವರು ಕೃತಜ್ಞತೆ ತಿಳಿಸಿದ್ದಾರೆ. ಹಾಗಾದ್ರೆ ಬಿಎಸ್ ವೈ ಅಭಿನಂದನೆಗಳನ್ನು ತಿಳಿಸಿ ಏನೆಲ್ಲ ತಿಳಿಸಿದ್ದಾರೆ ಎನ್ನುವುದನ್ನು ಈ ಕೆಳಗಿನಂತಿದೆ ನೋಡಿ...


ಬೆಂಗಳೂರು, [ಅ.28]: ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಉರುಳಲು ಬಿಡುವುದಿಲ್ಲ ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು [ಸೋಮವಾರ] ಸಿಎಂ ಯಡಿಯೂರಪ್ಪ ಮಾತನಾಡಿ, ಸರ್ಕಾರವನ್ನು ಡಿಸ್ಟರ್ಬ್ ಮಾಡೋದು ಬೇಡ ಎಂದು ಕುಮಾರಸ್ವಾಮಿ ನಮ್ ಸರ್ಕಾರಕ್ಕೆ ಬೆಂಬಲಿಸಿದ್ದಾರೆ.  ಇದಕ್ಕಾಗಿ ಕುಮಾರಸ್ವಾಮಿಯವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು.

Tap to resize

Latest Videos

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಅನ್ನೋದು ಕುಮಾರಸ್ವಾಮಿ ನಂಬಿಕೆ. ಅತಿವೃಷ್ಟಿ ಸೇರಿದಂತೆ ಬೇರೆ-ಬೇರೆ ಜನರ ಸಮಸ್ಯೆಗಳನ್ನು ಸರ್ಕಾರ ಉತ್ತಮವಾಗಿ ನಿಭಾಯಿಸುತ್ತಿದೆ. ಹಾಗಾಗಿ ಈ ಸರ್ಕಾರಕ್ಕೆ ತೊಂದರೆ ಮಾಡೋದು ಬೇಡ ಎಂದು ಕುಮಾರಸ್ವಾಮಿ ನಮ್ ಸರ್ಕಾರಕ್ಕೆ ಬೆಂಬಲಿಸಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಬಿಜೆಪಿ ಸರ್ಕಾರ ಪತನಗೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.  ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನನ್ನ ಕೈಯಲ್ಲಿದೆ. ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದರು. 

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ: ಎಚ್‌ಡಿಕೆ ಅಚ್ಚರಿ ಹೇಳಿಕೆ!

ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಮಾತುಗಳನ್ನಾಡಿರುವುದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲಿನ ಸಿಟ್ಟಿಗೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಷ್ಟೇ ಅಲ್ಲದೇ ಇಡಿ ಹಾಗೂ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಪಾರಾಗಲು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿವೆ.

ಒಟ್ಟಿನಲ್ಲಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ದ್ವೇಷದ ರಾಜಕಾರಣ ಮುಂದುವರಿದಂತೂ ಸತ್ಯ.

ಅಕ್ಟೋಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

click me!