ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಚಿವ ಸಂತೋಷ್ ಲಾಡ್

By Kannadaprabha News  |  First Published Nov 5, 2023, 5:23 AM IST

ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನಿಸುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ.


ಚಿತ್ರದುರ್ಗ (ನ.05): ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನಿಸುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ, ಐದು ವರ್ಷ ನಾನೇ ಸಿಎಂ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆದಿದ್ದಾರೆಂದು ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ ಸಂತೋಷ್ ಲಾಡ್, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ಅವರವರ ಅಭಿಪ್ರಾಯ ಹೇಳುತ್ತಾರೆ ಎಂದರು. ಪಕ್ಷದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಇದರಿಂದ ಸಾಮಾನ್ಯ ಜನರಿಗೆ ಅದರಿಂದ ತೊಂದರೆ ಆಗಲ್ಲ. 

ಬಿಜೆಪಿ ಆಪರೇಷನ್ ಕಮಲ ಹಾಗೂ ಬರ ಅಧ್ಯಯನದ ಬದಲು ಕೇಂದ್ರದಿಂದ ಅನುದಾನ ತರಲಿ. ಪ್ರಧಾನಿ ಪ್ರಚಾರಕ್ಕೆ ಕೇಂದ್ರ 6 ಸಾವಿರ ಕೋಟಿ ಖರ್ಚು ಮಾಡಿದೆ ಎಂದರು. ಹೈಕಮಾಂಡ್ ಸೂಚಿಸಿದರೆ ನಾನೂ ಸಿಎಂ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಅದು ಅವರ ವೈಯುಕ್ತಿಕ ಅಭಿಪ್ರಾಯ. ಎಲ್ಲಾ ಶಾಸಕರು ಹೇಳಿದರೆ ನೀವೂ ಸಿಎಂ ಆಗಬಹುದು ಎಂದು ಮಾಧ್ಯಮದವರತ್ತ ನಗೆ ಚಟಾಕಿ ಹಾರಿಸಿದರು. ನಾನಂತೂ ಸಿಎಂ ಆಕಾಂಕ್ಷಿಯಲ್ಲವೆಂದು ಸ್ಪಷ್ಟಪಡಿಸಿದರು.

Tap to resize

Latest Videos

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಲ್ಲ: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

ಡಿಕೆಶಿ ಸಿಎಂ ಆಗಲಿ ಅಂದರೆ ತಪ್ಪೇನಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವಾಗಿ ಯಾವ ಅಸಮಾಧಾನವೂ ಇಲ್ಲ. ನಮ್ಮ ನಾಯಕರೂ(ಡಿ.ಕೆ.ಶಿವಕುಮಾರ್‌) ಬೆವರು ಸುರಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ನಾವೆಲ್ಲರು ಅವಕಾಶ ಕೊಡಬೇಕೆಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಮೂಲಕ ಒಂದೂವರೆ ವರ್ಷದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬಿಎಸ್‌ವೈದು ಗುಲಾಮಿ ಮನಸ್ಥಿತಿ: ಸಿದ್ದರಾಮಯ್ಯ ಕಿಡಿ

ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ನಿಷ್ಠೆ ಪ್ರಾಮಾಣಿಕತೆಯಿಂದ ಹೋರಾಟ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಅವಕಾಶ ಸಿಗಬೇಕೆಂಬುದು ನಾನು ಮಾತ್ರವಲ್ಲ ಪಕ್ಷದ ಕಾರ್ಯಕರ್ತರು ಹಾಗೂ ಜನರ ಕೂಗು, ಎಲ್ಲರ ಆಸೆ ಅಭಿಲಾಷೆಯೂ ಆಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವಾಗಿ ಅಸಮಾಧಾನ ಪಡುವಂಥದ್ದೇನಿದೆ? ಎಲ್ಲರಿಗೂ ಅವಕಾಶ ಸಿಗಬೇಕು. ಪಕ್ಷದ ವರಿಷ್ಠರು ಸೂಕ್ತ ಸಂದರ್ಭದಲ್ಲಿ ಅವಕಾಶ ಮಾಡಿಕೊಡುತ್ತಾರೆಂಬ ವಿಶ್ವಾಸವಿದೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ನಮಗೆ ರಾಜ್ಯದ ಅಭಿವೃದ್ಧಿ ಆಗಬೇಕು. ಇದಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

click me!