ಸಿಎಂ ಈಗ ಕಾಂಪ್ರಮೈಸ್ ರಾಜಕಾರಣ ಮಾಡುತ್ತಿದ್ದಾರೆ: ಸಿದ್ದರಾಮಯ್ಯರ ರಾಜಕೀಯದ ಅನಿವಾರ್ಯತೆ ಬಗ್ಗೆ ಜಾರಕಿಹೊಳಿ ಹೇಳಿದ್ದೇನು?

Kannadaprabha News   | Kannada Prabha
Published : Apr 22, 2026, 06:48 AM IST
Satish Jarkiholi

ಸಾರಾಂಶ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯನವರ ಕಾಂಪ್ರಮೈಸ್ ರಾಜಕಾರಣವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ ಎಂದಿರುವ ಅವರು, ಜಬ್ಬಾರ್ ಅಮಾನತು, ಅಲ್ಪಸಂಖ್ಯಾತರ ಮುನಿಸು ಹಾಗೂ ಸಂಪುಟ ಪುನಾರಚನೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಮೈಸೂರು/ಚಾಮರಾಜನಗರ: ಸಿಎಂ ಸಿದ್ದರಾಮಯ್ಯನವರು ಈಗ ಕಾಂಪ್ರಮೈಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಕಾಂಪ್ರಮೈಸ್ ಪಾಲಿಟಿಕ್ಸ್ ಈಗ ಅನಿವಾರ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ಟೈಮ್‌ನಲ್ಲೂ ಒಂದೇ ರೀತಿ ಬಿಗಿಯಾಗಿ ರಾಜಕಾರಣ ಮಾಡಲು ಆಗಲ್ಲ. ಕಾಂಪ್ರಮೈಸ್ ಅನಿವಾರ್ಯ ಎಂದರು.

ಬೆಂಬಲಿಗರನ್ನು ಕಾಪಾಡುವ ವಿಚಾರದಲ್ಲಿ ಸಿದ್ದರಾಮಯ್ಯ ವೀಕ್ ಆಗಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಹಾಗೆ ಅನ್ನಿಸುವುದಿಲ್ಲ, ರಾಜಕೀಯದಲ್ಲಿ ಕೆಲವೊಮ್ಮೆ ವೀಕ್ ಆಗಿರಬೇಕಾಗುತ್ತದೆ, ಮತ್ತೆ ಕೆಲವೊಮ್ಮೆ ಸ್ಟ್ರಾಂಗ್ ಕೂಡ ಆಗಬೇಕಾಗುತ್ತದೆ. ಎಲ್ಲವೂ ಸಮಯ-ಸಂದರ್ಭಕ್ಕೆ ತಕ್ಕಂತೆ ಇರಬೇಕು ಎಂದರು.

ಜಬ್ಬಾರ್‌ ಅಮಾನತು ಕುರಿತು ಪ್ರತಿಕ್ರಿಯಿಸಿ, ನಮ್ಮಲ್ಲಿ ಬಹಳಷ್ಟು ಜನ ಸಸ್ಪೆಂಡ್ ಆದವರು ಮತ್ತೆ ವಾಪಸ್ ಬಂದಿದ್ದಾರೆ. ಜಬ್ಬಾರ್ ಕೂಡ ವಾಪಸ್ ಬರುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಜಬ್ಬಾರ್ ಅಮಾನತು ತೆರುವಾಗುವ ಸುಳಿವು ನೀಡಿದರು.

ಕಾಂಗ್ರೆಸ್‌ ವಿರುದ್ಧ ಅಲ್ಪಸಂಖ್ಯಾತರು ಮುನಿಸಿಕೊಂಡಿರುವುದರ ಬಗ್ಗೆ ಮಾತನಾಡಿ, ಇದನ್ನು ಸರಿಪಡಿಸುತ್ತೇವೆ, ಇದು ರಾಜ್ಯದ ಸಮಸ್ಯೆಯಲ್ಲ, ದಾವಣಗೆರೆಯಲ್ಲಿ ಮಾತ್ರ ಆಗಿರುವುದು ಎಂದರು.

ದಾವಣಗೆರೆ ಉಪ ಚುನಾವಣೆ ಸಂಬಂಧ ಮುಸ್ಲಿಂ ನಾಯಕರಿಗೆ ನೋಟಿಸ್ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಫಲಿತಾಂಶ ಬರುವವರೆಗೂ ಕಾಯಬೇಕು. ಅಷ್ಟರಲ್ಲೇ ನೋಟಿಸ್ ಕೊಡುವುದು, ಸಸ್ಪೆಂಡ್ ಮಾಡುವುದು ಸರಿಯಲ್ಲ. ಇದು ಮುಸ್ಲಿಂ ಮತಬ್ಯಾಂಕ್ ಮೇಲೆ ಪರಿಣಾಮ ಬೀರಲಿದೆ. ಮೊದಲು ಫಲಿತಾಂಶ ಬರಲಿ. ಯಾರದ್ದಾದರೂ ತಪ್ಪಾಗಿದ್ದರೆ ಆಮೇಲೆ ಕ್ರಮ ಕೈಗೊಳ್ಳೋಣ. ಈಗಲೇ ಈ ಕ್ರಮಗಳು ಸರಿಯಲ್ಲ ಎಂದು ಪಕ್ಷದ ನಾಯಕರಿಗೆ ಹೇಳಿದ್ದೇನೆ. ಯಾರ್ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದರು, ಯಾವ ರೀತಿ ಮಾಡಿದರು ಎಂಬ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಮೊದಲು ಫಲಿತಾಂಶ ಬರಲಿ ಎಂದರು.

ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿ, ಹೈಕಮಾಂಡ್ ಒಪ್ಪಿದ ಬಳಿಕವೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಆಗಲಿದೆ. ಆದರೆ, ಯಾವಾಗ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಸಿಗ್ನಲ್ ಕೊಟ್ಟ ಬಳಿಕ ಸೀನಿಯರ್-ಜೂನಿಯರ್ ಮಿಕ್ಸ್ ಆಗಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಸಿದ್ದು ಮೊದ್ಲು ಹೇಗಿದ್ದರೋ ಈಗ್ಲೂ ಹಾಗೆಯೇ ಇದ್ದಾರೆ, ಟಗರು ಯಾವತ್ತೂ ಟಗರೇ: ಜಮೀರ್‌
Karnataka Politics: ಸಿದ್ದರಾಮಯ್ಯ ಅವ್ರು ಸೈಲೆಂಟ್ ಆಗಿರಬಹುದು, ಎಂದಿಗೂ ಅವರು ಟಗರು: ಜಮೀರ್