ಚುನಾವಣಾ ಆಯೋಗವನ್ನು ಟೀಕಿಸಿದ ಸಿಎಂ, ಡಿಸಿಎಂ ಕ್ಷಮೆ ಕೇಳಲಿ: ವಿಜಯೇಂದ್ರ

Published : Jul 26, 2025, 06:35 AM IST
BY Vijayendra

ಸಾರಾಂಶ

ಚುನಾವಣಾ ಆಯೋಗದಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನಿಸುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬೆಂಗಳೂರು (ಜು.26): ಚುನಾವಣಾ ಆಯೋಗದಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನಿಸುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಮೂಲಕ ರಾಹುಲ್ ಗಾಂಧಿಯವರು ಚುನಾವಣಾ ಆಯೋಗ ಮೇಲೆ ಆರೋಪ ಮಾಡಿದ್ದಾರೆ. ಈ ಮಾತಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಇಟ್ಟರು ಎಂಬ ಗಾದೆ ಮಾತಿದೆ. ಹಾಗಾಗಿದೆ ಇವತ್ತು ಕಾಂಗ್ರೆಸ್ ಪರಿಸ್ಥಿತಿ ಎಂದು ಟೀಕಿಸಿದರು.

ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ರಾಹುಲ್ ಗಾಂಧಿ ಮತ್ತಿತರರು ಇಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಚುನಾವಣಾ ಆಯೋಗಕ್ಕೆ ಮಾಡಿದ ಅಪಮಾನ ಮಾತ್ರವಲ್ಲ; ಇದು ಪ್ರಜಾಪ್ರಭುತ್ವ ವಿರೋಧಿ ನಡೆಯೂ ಹೌದು. ಶಿವಕುಮಾರ್ ಅವರು ತಮ್ಮ ಸೋದರ ಡಿ.ಕೆ.ಸುರೇಶ್ ಅವರು ಇದೇ ಅಕ್ರಮದಿಂದ ಸೋತಿದ್ದಾಗಿ ಹೇಳಿದ್ದಾರೆ. ಚುನಾವಣಾ ಅಕ್ರಮ ನಡೆದಿದ್ದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 136 ಶಾಸಕರ ಬಲದೊಂದಿಗೆ ಯಾಕೆ ಅಧಿಕಾರಕ್ಕೆ ಬರುತ್ತಿತ್ತು ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ, ನರೇಂದ್ರ ಮೋದಿ ಹಾಗೂ ಬಿಜೆಪಿ ಸೇರಿ ಚುನಾವಣಾ ಆಯೋಗದ ದುರ್ಬಳಕೆ ಮಾಡಿದ್ದಿದ್ದರೆ ನೀವು ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ ಸಿದ್ದರಾಮಯ್ಯನವರೇ? ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಇವತ್ತು ರಾಜ್ಯದಲ್ಲಿ ಓಡಾಡುತ್ತಿಲ್ಲವೇ? ಈಚೆಗೆ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಗೆದ್ದರಲ್ಲವೇ? ಆಗ ಚುನಾವಣಾ ಆಯೋಗದ ದುರ್ಬಳಕೆ ಆಗಿಲ್ಲವೇ ಎಂದು ತೀಕ್ಷ್ಣವಾಗಿ ಹೇಳಿದರು.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರ್ ಅವರ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಹೇಳಿಕೆ ಕೊಡುವುದಾದರೆ ಸುಪ್ರೀಂ ಕೋರ್ಟಿನಲ್ಲಿ ತಿಳಿಸಲಿ. ಚುನಾವಣಾ ಆಯೋಗವನ್ನು ಪ್ರಶ್ನಿಸುವುದು, ಅನುಮಾನದಿಂದ ನೋಡುವುದು ಇವರಿಗೆ ಶೋಭೆ ತರುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ