
ಬೆಂಗಳೂರು, [ಫೆ.26]: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳುಗಳ ನಂತರ ಜೆಡಿಎಸ್ ಕೊನೆಗೂ ನಿಗಮ ಮಂಡಳಿ ಪಟ್ಟಿ ಪ್ರಕಟಿಸಿದೆ.
ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಓರ್ವ ಜೆಡಿಎಸ್ ಮುಖಂಡ ಸೇರಿದಂತೆ 8 ಶಾಸಕರು ಸೇರಿ ಒಟ್ಟು 9 ಮಂದಿಯನ್ನು ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಕುಮಾರಸ್ವಾಮಿ ಇಂದು [ಮಂಗಳವಾರ] ಆದೇಶ ಹೊರಡಿಸಿದ್ದಾರೆ.
ಮಾಜಿ ಶಾಸಕ ಕೋನರೆಡ್ಡಿ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇನ್ನು ಯಾರಿಗೆಲ್ಲ ನಿಗಮ ಮಂಡಳಿ ಭ್ಯಾಗ್ಯ ಸಿಕ್ಕಿದೆ ಎನ್ನುವುದು ಈ ಕೆಳಗಿನಂತಿದೆ.
1.ಶಾಸಕ ನಾಗನಗೌಡ - ಕೊಳಗೇರಿ ಅಭಿವೃದ್ಧಿ ಮಂಡಳಿ
2.ರಾಜಾವೆಂಕಟಪ್ಪ ನಾಯಕ - ಕರ್ನಾಟಕ ಪ್ರವಾಸೋದ್ಯಮ ನಿಗಮ
3.ಡಿ.ಸಿ ಗೌರಿಶಂಕರ್ - ಎಂಎಸ್ ಐಲ್
4.ಬಿ. ಸತ್ಯನಾರಾಯಣ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
5.ನಿಸರ್ಗ ನಾರಾಯಣಸ್ವಾಮಿ - ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ
6.ಕೆ. ಅನ್ನದಾನಿ - ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ
7.ಶಿವಲಿಂಗೇಗೌಡ - ಕರ್ನಾಟಕ ಗೃಹ ಮಂಡಳಿ
8.ಕೆ. ಮಹದೇವ - ಕೈಗಾರಿಕಾ ಮೂಲಸೌಕರ್ಯ ಅಭಿವೃದ್ದಿ ನಿಗಮ
9.ಜೆಡಿಎಸ್ ಮುಖಂಡ ಜಫ್ರಲ್ಲಾ ಖಾನ್ ಗೆ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.