
ಸಾಗರ: ನ.20ರ ನಂತರ ರಾಜ್ಯದ 44 ಲಕ್ಷ ರೈತ ಕುಟುಂಬಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿ ಅವರಿಗೆ ಬೆಂಗಳೂರಿನಲ್ಲಿ ಋುಣಭಾರಮುಕ್ತ ಪತ್ರ ವಿತರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ನಗರದಲ್ಲಿ ಲೋಕಸಭಾ ಉಪಚುನಾವಣೆಯ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 22 ಲಕ್ಷ ರೈತಕುಟುಂಬಗಳ ಸಹಕಾರಿ ಬ್ಯಾಂಕ್‌ನ ಸಾಲ ಮನ್ನಾ ಮಾಡಲಾಗಿದೆ. ನಾವು ರೈತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಲು ಹೊರಟರೆ ಕೇಂದ್ರ ಸರ್ಕಾರವನ್ನು ದುರುಪಯೋಗಪಡಿಸಿಕೊಂಡು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಯಾರ‍್ಯಾರು ಎಷ್ಟೇಷ್ಟುಅರಣ್ಯ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ನನ್ನ ಬಳಿ ಇದ್ದು, ಸಮಯ ಬಂದಾಗ ಬಹಿರಂಗ ಪಡಿಸುವುದಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.