
ಬೆಂಗಳೂರು(ಸೆ.29): ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಅಧಿಕೃತಗೊಳ್ಳುತ್ತಿದ್ದಂತೆ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಮುಂದಿನ ತಿಂಗಳು 15ರ ನಂತರ ಬೆಂಬಲಿಗರ ಸಭೆ ನಡೆಸಿ ತಮ್ಮ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿ ಬಿಜೆಪಿಯೊಂದಿಗೆ ಮೈತ್ರಿ ಖಚಿತವಾದ ನಂತ ಸಿ.ಎಂ.ಇಬ್ರಾಹಿಂ ಪಕ್ಷದ ಯಾವುದೇ ಪತ್ರಿಕಾಗೋಷ್ಠಿಗಳಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೇ ಮೈತ್ರಿ ವಿಚಾರದಲ್ಲಿ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಇಬ್ರಾಹಿಂ ಅವರ ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !
ಪಕ್ಷ ತೊರೆಯುವಂತೆ ಬೆಂಬಲಿಗರು ಒತ್ತಾಯ ಮಾಡುತ್ತಿರುವ ಕಾರಣ ಮುಂದಿನ ತಿಂಗಳು 15ರ ಬಳಿಕ ಬೆಂಬಲಿಗರ ಸಭೆ ಕರೆದು ಚರ್ಚೆ ನಡೆಸುವ ಚಿಂತನೆ ನಡೆಸಿದ್ದಾರೆ. ಸಭೆಯ ಬಳಿಕ ಸೂಕ್ತ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಜೆಪಿ ಜತೆ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರು ತೀವ್ರ ಅಸಮಾಧಾನಗೊಂಡಿದ್ದು, ಈಗಾಗಲೇ ಕೆಲವರು ಪಕ್ಷವನ್ನು ತೊರೆದಿದ್ದಾರೆ. ಇನ್ನು ಕೆಲವರು ಪಕ್ಷ ತೊರೆಯುವಲ್ಲಿ ಮುಂದಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.