ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಶಾಸಕ ಕೆ.ಎಂ.ಉದಯ್

Kannadaprabha News   | Kannada Prabha
Published : Jul 13, 2025, 06:23 PM IST
km uday

ಸಾರಾಂಶ

ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು, ಇದರ ಬಗ್ಗೆ ವಿಪಕ್ಷಗಳು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು.

ಮದ್ದೂರು (ಜು.13): ಮುಖ್ಯಮಂತ್ರಿ ಸ್ಥಾನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು, ಇದರ ಬಗ್ಗೆ ವಿಪಕ್ಷಗಳು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು. ತಾಲೂಕಿನ ಸೋಮನಹಳ್ಳಿ ಸಮೀಪದ ಖಾಸಗಿ ಹೋಟೆಲ್ ವೊಂದರಲ್ಲಿ ಉದ್ಯಮಿ ಸಿ.ಟಿ.ಶಂಕರ್ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಆತಗೂರು ಹೋಬಳಿ ಮಾಚಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗೋವಿಂದ ಮತ್ತು ಅವರ ಬೆಂಬಲಿಗರನ್ನು ಅಭಿನಂದಿಸಿದರು.

ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ನಾವಾಗಲಿ, ಶಾಸಕರಾಗಲಿ ಅಥವಾ ಪಕ್ಷದವರಾಗಲಿ ಮಾತನಾಡುತ್ತಿಲ್ಲ. ನಮ್ಮ ಪಕ್ಷದ ವಿಚಾರವಾಗಿ ಮಾತನಾಡಲು ಬಿಜೆಪಿ- ಜೆಡಿಎಸ್ ನಾಯಕರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು. ಪಕ್ಷ ಮತ್ತು ಸರ್ಕಾರದಲ್ಲಿ ಏನೇ ಬೆಳವಣಿಗೆಯಾದರೂ ಅದನ್ನು ಹೈಕಮಾಂಡ್ ಮಾಡುತ್ತದೆ. ಸಿಎಂ ಬದಲಾಗುತ್ತಾರೆ, ಇವರಿಗೆ ಸಿಎಂ ಹುದ್ದೆ ಸಿಗಲ್ಲ ಎಂದು ದಾರಿಯಲ್ಲಿ ಹೋಗುವವರೆಲ್ಲ ಚರ್ಚೆ ಮಾಡಿದರೆ ಅದಕ್ಕೆ ಉತ್ತರಿಸುವ ಅಗತ್ಯವಿಲ್ಲ ಎಂದು ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ನಾನು ಕಾಂಗ್ರೆಸ್ ಶಾಸಕನಾಗಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಅಂತ ಹೇಳಿಲ್ಲ. ನಾವು ಪಕ್ಷದ ಪರ. ನಮ್ಮಲ್ಲಿ ನಾಯಕತ್ವದ ವಿಚಾರವಾಗಿ ಯಾವುದೇ ಕಾಂಪಿಟೇಷನ್ ಇಲ್ಲ. ಯಾರ ಪರವೂ ನಿಂತಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಪಕ್ಷ ಏನು ಹೇಳುತ್ತದೆ ಪ್ರಕಾರ ಇರುತ್ತೇವೆ ಎಂದರು. ಸರ್ಕಾರದ ಸಚಿವರ ಕಾರ್ಯ ಸಾಧನೆ ಬಗ್ಗೆ ಮೌಲ್ಯಮಾಪನ ನಡೆಯುತ್ತಿರುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು. ಇದೇ ವೇಳೆ ಆತಗೂರು ಗ್ರಾಮದ ಜೆಡಿಎಸ್ ಮುಖಂಡರಾದ ಉಮೇಶ್, ವೆಂಕಟೇಶ್, ಪುಟ್ಟಸ್ವಾಮಿ, ಚನ್ನೇಗೌಡ, ಪುಟ್ಟರಾಜು, ಸುರೇಶ್ ಹಾಗೂ ಮಹೇಶ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಹಾಜರಿದ್ದರು.

ಕಾರ್ಯಕರ್ತರು ಭಾಗಿ: ತಾಲೂಕಿನ ಸೋಮನಹಳ್ಳಿ ಬಳಿ ಜುಲೈ 28ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕ್ಷೇತ್ರದಿಂದ ಕನಿಷ್ಠ 30 ಸಾವಿರ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದೆ. ರಾಜ್ಯದ ಮೂರ್ನಾಲ್ಕು ಭಾಗಗಳಲ್ಲಿ ಸಾಧನಾ ಸಮಾವೇಶ ಯಶಸ್ವಿಯಾಗಿ ನಡೆಸಿದೆ.

ಈ ತಿಂಗಳು 28ರಂದು ಮದ್ದೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1200 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಕ್ಷೇತ್ರದಿಂದ ಕನಿಷ್ಠ 30 ಸಾವಿರ ಮಂದಿ ಭಾಗವಹಿಸಬೇಕು. ಪಕ್ಷದ ವಿವಿಧ ಘಟಕಗಳ ಮುಂಚೂಣಿ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ