
ಬೆಂಗಳೂರು, (ಆ.06): ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕ ರದ್ದು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಪ್ರಶ್ನಿಸಿ ವಕೀಲ ಎಸ್. ಉಮಾಪತಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥವಾಗಿದೆ.
ಬಿಎಸ್‌ವೈ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳು ರದ್ದು, ರೇಣುಕಾಚಾರ್ಯ, ಸಂತೋಷ್‌ಗೆ ಶಾಕ್
ಪಿಐಎಲ್ ಸಲ್ಲಿಕೆಯಾಗಿದ್ದ ಹಿನ್ನೆಲೆ ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಗಳಾಗಿದ್ದವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು.
ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು. ಈ ರೀತಿ ಹುದ್ದೆ ಸೃಷ್ಟಿ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ.. ಎಂದು ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿತ್ತು. ಇಂದು (ಆ.06) ಹೈಕೋರ್ಟ್‌ಗೆ ಅವರ ನೇಮಕ ರದ್ದುಗೊಳಿಸಿರುವುದಾಗಿ ಉತ್ತರ ನೀಡಿದೆ.
ಈ ಹಿಂದೆ ಎನ್.ಆರ್.ಸಂತೋಷ್, ಎಸ್ ಆರ್ ವಿಶ್ವನಾಥ್, ಎಂಪಿ ರೇಣುಕಾಚಾರ್ಯ ಹಾಗೂ ಶಂಕರಗೌಡ ಪಾಟೀಲ್ ಅವರು
ಯಡಿಯೂರಪ್ಪನವರ ಅವರ ರಾಜಕೀಯ ಕಾರ್ಯದರ್ಶಿಗಳಾಗಿದ್ದರು. ಇದೀಗ ಬೊಮ್ಮಾಯಿ ಸಿಎಂ ಆದ ಬಳಿಕ ರಾಜಕೀಯ ಕಾರ್ಯದರ್ಶಿಗಳ ಹುದ್ದೆಗಳನ್ನು ರದ್ದು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.