
ಬೆಂಗಳೂರು (ಮಾ.1): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟವಟಿಕೆ ಆರಂಭವಾಗಿದೆ. ರಾಜ್ಯಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಎದುರಾಳಿ ಪಕ್ಷವನ್ನು ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಇವೆಲ್ಲದರ ಮಧ್ಯೆ ಇದೀಗ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ನ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ ಸರ್ಕಾರ ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಸರ್ಕಾರಗಳನ್ನ ಬೀಳಿಸುವುದು ಬಿಜೆಪಿಗೆ ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.