ಮುಸ್ಲಿಮರನ್ನು ಸಂತೈಸುತ್ತಿರುವ ಸಿಎಂ ಸಿದ್ದರಾಮಯ್ಯ: ಯಡಿಯೂರಪ್ಪ ಟೀಕೆ

By Kannadaprabha News  |  First Published Dec 8, 2023, 1:00 AM IST

ಮುಸ್ಲಿಂ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಂದ ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಈ ರಾಜ್ಯದ ಜನ ಕ್ಷಮಿಸಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟೀಕಿಸಿದರು.


ಶಿವಮೊಗ್ಗ (ಡಿ.08): ಮುಸ್ಲಿಂ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಂದ ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಈ ರಾಜ್ಯದ ಜನ ಕ್ಷಮಿಸಲ್ಲ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಟೀಕಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಓಲೈಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ನಿರಂತರವಾಗಿ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ. 

ಸಿಎಂ ಏನು ಉತ್ತರ ಕೊಡುತ್ತಾರೆ ನೋಡೋಣ ಎಂದರು. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಹೇಳಿಕೆ ಕೊಡಬಾರದು. ಅಧಿವೇಶನದಲ್ಲಿ ಸಮಯದಲ್ಲಿ ಹೊರಗೆ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುತ್ತೇನೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಕುಟುಕಿದರು. ಬರಗಾಲದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕೇಂದ್ರದಿಂದ ಪರಿಹಾರ ಕೊಡುವ ಬಗ್ಗೆ ನಾವು ಮನವಿ ಮಾಡುತ್ತೇವೆ. ರಾಜ್ಯ ಸರ್ಕಾರ ಕೊಡುವ ಪರಿಹಾರವನ್ನು ಬೇಗ ಕೊಡಬೇಕು. 

Tap to resize

Latest Videos

ಬರ ಪರಿಹಾರಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ: ಯತೀಂದ್ರ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಪರಿಹಾರ ಕೊಡುವವರೆಗೆ ಕಾಯಬಾರದು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಬೇಕು. ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ ಸಿಗಬೇಕು. ಅಧಿವೇಶನದಲ್ಲಿ ಇನ್ನೂ ಸಾಕಷ್ಟು ಸಮಯ ಇದೆ. ಈ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಎಂದರು. ಲೋಕಸಭೆ ಚುನಾವಣೆ ಸಿದ್ಧತೆ ನಡೆದಿದೆ. ಎಲ್ಲಾ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ನೋಡೋಣ ಜನ ಏನು ತೀರ್ಮಾನ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದು ಸಮುದಾಯದ ಓಲೈಕೆ ಸರಿಯಲ್ಲ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಸ್ಲಿಂ ಸಮುದಾಯಕ್ಕೆ ಹಣ ನೀಡುವುದರಲ್ಲಿ ತಪ್ಪೇನಿಲ್ಲ. ಆದರೆ. ಅದನ್ನೇ ದೊಡ್ಡದಾಗಿ 10 ಸಾವಿರ ಕೋಟಿ ಕೊಡುತ್ತೀನಿ ಎಂದು ಬಿಂಬಿಸುವುದು ಸರಿಯಲ್ಲ. ಇದು ಹಿಂದುಗಳ ಆಕ್ರೋಶಕ್ಕೆ ಕಾಣವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿ ಅವರು ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ. ಈ ಬಗ್ಗೆ ಈಗಾಗಲೇ ಹಲವು ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇವಲ ಮುಸ್ಲಿಂ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ತಪ್ಪಾಗಲಿದೆ ಎಂದು ಭವಿಷ್ಯ ನುಡಿದರು.

ಕಟ್ಟ ಕಡೆಯ ಮನುಷ್ಯನಿಗೂ, ಶ್ರೀಮಂತರಿಗೂ ಒಂದೇ ಕಾನೂನು: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನದಲ್ಲಿ ವೀರ ಸಾವರ್ಕರ್ ಫೋಟೋ ತೆರವು ಕ್ರಮ ಸರಿಯಲ್ಲ. ಈ ರೀತಿಯ ಪ್ರಯತ್ನಕ್ಕೆ ಯಾರೂ ಕೈ ಹಾಕಬಾರದು. ಮುಂದೆ ಮೋದಿ ಹೆಸರಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜ್ಯದ ಎಲ್ಲ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಇದೇ ವೇಳೆ ಮಾಜಿ ಸಚಿವ ಸೋಮಣ್ಣ ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ. ನಮ್ಮ ಪಕ್ಷದಲ್ಲೇ ಇರುತ್ತಾರೆ, ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

click me!