ವಿಜಯದಶಮಿ ದಿನವೇ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ತೆರಿಗೆ ಸಮರ ಕರೆ

By Kannadaprabha NewsFirst Published Oct 13, 2024, 6:28 AM IST
Highlights

'ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ.

ಬೆಂಗಳೂರು (ಅ.13): 'ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ. 'ದುರಾಡಳಿತ ಹಾಗೂ ಭ್ರಷ್ಟಾಚಾರ ದಿಂದ ಅಭಿವೃದ್ಧಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಬಿಮಾರು ರಾಜ್ಯಗಳಿಗೆ ಕನ್ನಡಿಗರ ಬೆವರಿನ ಗಳಿಕೆ ಯಾಕೆ ಪೋಲಾ ಗಬೇಕು?' ಎಂದೂ ಅವರು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಕೇಂದ್ರದ ತೆರಿಗೆ ಅನ್ಯಾ ಯದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ' ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಸ್ವಾಭಿಮಾನಿ ಕನ್ನಡಿಗ ಪ್ರಶ್ನಿಸಬೇಕು: ರಾಜ್ಯಕ್ಕೆ ಕೇವಲ 6,498 ಕೋಟಿ ರು. ತೆರಿಗೆ ಪಾಲು ನೀಡಿರುವ ಕೇಂದ್ರದ ವಿರುದ್ಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, “ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿ ದ್ದೇವೆ ಎಂದು ಪ್ರತಿಯೊಬ್ಬ ಸ್ವಾಭಿ ಮಾನಿ ಕನ್ನಡಿಗನು ವಿಜಯದಶಮಿ ದಿನ ಸರ್ಕಾರವನ್ನು ಕೇಂದ್ರ ಪ್ರಶ್ನಿಸಬೇಕಿದೆ' ಎಂದು ಹೇಳಿದ್ದಾರೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರ ದೇಶಕ್ಕೆ 31,962 ಕೋಟಿ ರು., ಬಿಹಾರಕ್ಕೆ 17,921 ಕೋಟಿ ರು., ಮಧ್ಯ ಪ್ರದೇಶಕ್ಕೆ 13,987 ಕೋಟಿ ರು. ಮತ್ತು ರಾಜಸ್ಥಾನಕ್ಕೆ ರು. ಕೋಟಿಯಷ್ಟು ತೆರಿಗೆ ಪಾಲನ್ನು 10,737 ನೀಡಲಾಗಿದೆ. 

Latest Videos

ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗ್ಯಾರು ಹೇಳಿದ್ದು?: ಸಚಿವರಿಗೆ ಸಂಪುಟದಲ್ಲಿ ಸಿಎಂ ಕ್ಲಾಸ್‌

ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರ ಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ ಶೇ.10.05, ರಾಜಸ್ಥಾನಕ್ಕೆ ಶೇ.6.02 ಮತ್ತು ಮಧ್ಯಪ್ರದೇಶಕ್ಕೆ ಶೇ.7.85 ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ.3.64 ಮಾತ್ರ. ಅಭಿವೃದ್ಧಿ ಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯ ಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ. 79,770 ಕೋಟಿ ಅನ್ಯಾಯ ಎಷ್ಟು ದಿನ ಸಹಿಸಲು ಸಾಧ್ಯ?:1 5ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರು. ನಷ್ಟವಾಗಿದೆ. 

ದೇಶದ ಜನಸಂಖ್ಯೆಯಲ್ಲಿ ರಾಜ್ಯದ ಪಾಲು ಶೇ.5ರಷ್ಟಿದ್ದರೂ ದೇಶದ ಜಿಡಿಪಿಗೆ ಶೇ.8.4ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಸತತವಾಗಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದೇವೆ. ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ರು. ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು 45,000 ಕೋಟಿ ಮಾತ್ರ. ಈ ಅನ್ಯಾಯವನ್ನು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಬೈಎಲೆಕ್ಷನ್‌ನಿಂದ ಡಿಕೆಶಿಗೆ ಚನ್ನಪಟ್ಟಣ ನೆನಪಾಗ್ತಿದೆ: ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಸಂಗ್ರಹಿಸಿ ಪ್ರಯೋಜನವೇನು?: ಕರ್ನಾಟಕದಿಂದ ಕ್ರೋಢೀಕರಿಸಲ್ಪಟ್ಟ ತೆರಿಗೆ ಕನ್ನಡಿಗರ ಕಷ್ಟನಷ್ಟಗಳಿಗೆ ಒದಗದೆ ಹೋದರೆ, ಕನ್ನಡಿಗರ ಕಣ್ಣೀರು ಒರೆಸಲು ಬಳಕೆಯಾಗದೆ ಹೋದರೆ ಅಂತಹತೆರಿಗೆಯನ್ನು ಸಂಗ್ರಹಿಸಿ ಏನು ಪ್ರಯೋಜನ? ಲಕೋಪಲಕ್ಷ ಕೋಟಿರು.ಹಣವನ್ನು ತೆರಿಗೆಯಾಗಿ ನೀಡಿದ ನಂತರವೂ ಅಪರೂಪಕ್ಕೊಮ್ಮೆ ಬರುವಂತಹ ಅತಿವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ಕೆಲ ಸಾವಿರ ಕೋಟಿ ರು. ಹಣವನ್ನು ಕೇಂದ್ರ ನಮ್ಮವರ ಕಣ್ಣೀರು ಒರೆಸಲು ನೀಡದೆ ಹೋದರೆ ಒಕ್ಕೂಟ ವ್ಯವಸ್ಥೆಗೆ ಅರ್ಥವಿದೆಯೇ ಎಂದು ಕಟುವಾಗಿ ಟೀಕಿಸಿದ್ದಾರೆ.

click me!