ಲೋಕಸಭೆ ಚುನಾವಣೆ 2024: ಇಂದು ವರಿಷ್ಠರ ಜತೆ ಸಿದ್ದು,ಡಿಕೆಶಿ ರಣತಂತ್ರ ಸಭೆ

By Kannadaprabha News  |  First Published Jan 4, 2024, 4:19 AM IST

ಈಗಾಗಲೇ ಚುನಾವಣಾ ತಯಾರಿ ಆರಂಭಿಸಿರುವ ಕಾಂಗ್ರೆಸ್, ಚುನಾವಣೆ ಕಾರ್ಯ ತಂತ್ರಗಳ ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಪ್ರಮುಖ ನಾಯಕರ ಸಭೆ ಕರೆದಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದೆ.

ಬೆಂಗಳೂರು(ಜ.04):  ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜ.4 ಮತ್ತು 5ರಂದು ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ರಾತ್ರಿಯೇ ದೆಹಲಿಗೆ ತೆರಳಲಿದ್ದಾರೆ.

ಈಗಾಗಲೇ ಚುನಾವಣಾ ತಯಾರಿ ಆರಂಭಿಸಿರುವ ಕಾಂಗ್ರೆಸ್, ಚುನಾವಣೆ ಕಾರ್ಯ ತಂತ್ರಗಳ ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಪ್ರಮುಖ ನಾಯಕರ ಸಭೆ ಕರೆದಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದೆ.

Tap to resize

Latest Videos

ಯತ್ನಾಳ್‌ ಹೇಳಿಕೆಯಿಂದ ತನಿಖೆಗೆ ಬಲ, ದಾಖಲೆ ಬಿಡುಗಡೆ ಮಾಡಲಿ: ಪ್ರಿಯಾಂಕ್‌ ಖರ್ಗೆ

ಆ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಒಟ್ಟಾಗಿ ಬುಧವಾರ ಸಂಜೆ 7.40ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹೈಕಮಾಂಡ್‌ ನಾಯಕರ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ಅಲ್ಲದೆ, ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

click me!