ಲೋಕಸಭೆ ಚುನಾವಣೆ ಸಿದ್ಧತೆ: ಜ. 4ಕ್ಕೆ ಸಿದ್ದು, ಡಿಕೆಶಿ ದಿಲ್ಲಿಗೆ

By Kannadaprabha NewsFirst Published Dec 30, 2023, 10:16 AM IST
Highlights

ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಮುಂತಾದವರ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 

ಬೆಂಗಳೂರು(ಡಿ.30):  ಲೋಕಸಭೆ ಚುನಾವಣೆಗೆ ತಯಾರಿ ಆರಂಭಿ ಸಿರುವ ಕಾಂಗ್ರೆಸ್, ಚುನಾವಣೆ ಕಾರ್ಯ ತಂತ್ರಗಳ ಕುರಿತು ಚರ್ಚಿಸಲುಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. 

ಆ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಜ.4ರಂದು ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಮುಂತಾದವರ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 

Latest Videos

ಮೋದಿ ಮತ್ತೆ ಪ್ರಧಾನಿ ಆಗುವುದನ್ನ ಯಾರಿಂದಲೂ ತಪ್ಪಿಸಲಾಗಲ್ಲ: ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ಭವಿಷ್ಯ

ಕಳೆದ 10 ದಿನಗಳ ಹಿಂದಷ್ಟೇ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಕೆಲ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಲೋಕಸಭೆ ಚುನಾವಣೆ, ರಾಜ್ಯ ಸರ್ಕಾರದ ಕಾರ್ಯವೈಖರಿ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚಿಸಿ ಬಂದಿದ್ದರು. ಇದೀಗ ಲೋಕಸಭೆ ಚುನಾವಣೆ ಕುರಿತು ಸಿಎಂ ಮತ್ತು ಡಿಸಿಎಂ ಅವರನ್ನು ಹೈಕಮಾಂಡ್ ಮತ್ತೊಮ್ಮೆ ದೆಹಲಿಗೆ ಕರೆದಿದೆ. ಆ ಹಿನ್ನೆಲೆಯಲ್ಲಿ ಜ.4ರಂದು ಇಬ್ಬರೂ ನಾಯಕರುದೆಹಲಿಗೆ ಪ್ರಯಾಣಿಸಲಿದ್ದಾರೆ. ಹೈಕಮಾಂಡ್ ಜತೆಗಿನ ಲೋಕಸಭೆ ಚುನಾವಣೆಗೆ ತಯಾರಿ ಅಲ್ಲದೆ, ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

click me!