ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ

By Kannadaprabha News  |  First Published Jan 1, 2025, 8:30 AM IST

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಒತ್ತಾಯಿಸಿದರು. 


ಬಳ್ಳಾರಿ (ಜ.01): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಸಾವಿನ ಮರಣಪತ್ರ ನೋಡಿದರೆ ಸಚಿವ ಪ್ರಿಯಾಂಕ ಅವರೇ ತಪ್ಪಿತಸ್ಥ ಎಂಬಂತೆ ಕಂಡು ಬರುತ್ತಿದೆ. ಸಿಬಿಐ ತನಿಖೆಗೆ ವಹಿಸಿ, ಪ್ರಿಯಾಂಕ ಖರ್ಗೆ ಅವರ ಆಪ್ತನನ್ನು ತನಿಖೆಗೆ ಒಳಪಡಿಸಿದರೆ ಸತ್ಯಾಸತ್ಯತೆ ಹೊರ ಬರುತ್ತದೆ. ಪ್ರಿಯಾಂಕ ಖರ್ಗೆ ಸತ್ಯವಂತನಾಗಿದ್ದರೆ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲೆಸೆದರು.

ಪ್ರಿಯಾಂಕ ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಕ ರಾಜೀನಾಮೆ ಪಡೆಯುವ ಶಕ್ತಿಯಿಲ್ಲ. ತಾವು ಕಾಂಗ್ರೆಸ್‌ನಲ್ಲಿ ಪ್ರಭಾವಿ ಸಚಿವರಾಗಿದ್ದು ತನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದರಿತ ಪ್ರಿಯಾಂಕ, ಸೊಕ್ಕು, ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ದೂರಿದರು. ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಬಿಜೆಪಿ ನಡೆಸಿದ ಹೋರಾಟದಿಂದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದರು. ಈಗ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಲೇಬೇಕು. 

Tap to resize

Latest Videos

ಕನ್ಯಾಕುಮಾರಿಯಲ್ಲಿ ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ: ಪ್ರವಾಸಿಗರಿಗೆ ಮುಕ್ತ

ಯಾರೂ ಬಟ್ಟೆ ಹರಿದುಕೊಂಡರೂ ಏನೂ ಮಾಡಲಾಗದು ಎಂದಿರುವ ಪ್ರಿಯಾಂಕ್ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ನಡೆಸುತ್ತದೆ ಎಂದರು. ಮೃತ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಮೃತ ಸಚಿನ್ ಸಹೋದರಿಯರು ವಿದ್ಯಾವಂತರಾಗಿದ್ದು, ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷದ ಮುಖಂಡರಾದ ಗೋನಾಳ ರಾಜಶೇಖರಗೌಡ, ಎಚ್‌.ಹನುಮಂತಪ್ಪ, ದಮ್ಮೂರು ಶೇಖರ್ ಇತರರಿದ್ದರು.

ಚಂದ್ರಶೇಖರ ಆಗ್ರಹ: ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನೇರವಾಗಿ ಸಚಿವ ಪ್ರಿಯಾಂಕ ಖರ್ಗೆ ಕಾರಣರಾಗಿದ್ದಾರೆ. ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಪ್ರಸ್ತಾಪವಾಗಿದೆ. ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆಗೆ ಆಗ್ರಹಿಸಿದ್ದೀರಿ. ನಿಮಗೆ ಒಂದು ನ್ಯಾಯ, ಈಶ್ವರಪ್ಪ ಅವರಿಗೆ ಒಂದು ನ್ಯಾಯವೇ? ಭ್ರಷ್ಟಾಚಾರ, ಸುಪಾರಿ ಕಿಲ್ಲಿಂಗ್, ಹನಿಟ್ರ್ಯಾಪ್ ಆರೋಪ ಬಂದಿದೆ. ನಿಮ್ಮ ಜತೆ ಇರುವವರೇ ಕೊಲೆಗಾರರು ಎನ್ನುವುದು ಖಚಿತವಾಗಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಬೋರ್‌ವೆಲ್‌ ಕೊರೆದರೆ ನದಿ ಉಕ್ಕಿತು: ಸ್ಥಳಕ್ಕಾಗಮಿಸಿ ನಮಿಸಿದ ಜನ

ಜೈಲಿನಲ್ಲಿ ಸಿ.ಟಿ. ರವಿ ಅವರಿಗೆ ಸುರಕ್ಷತೆ ಇಲ್ಲವೆಂದು ಸುತ್ತಾಡಿಸಿದ್ದಾರೆ. ಠಾಣೆಗೆ ಕರೆದೊಯ್ದರೆ ಅವರ ಮೇಲೆ ದಾಳಿ ಆಗುತ್ತಿತ್ತು ಎಂದು ಮುಖ್ಯಮಂತ್ರಿ ಅವರೇ ಹೇಳಿದ್ದಾರೆ. ಜಗತ್ತಿನಲ್ಲಿ ಸುರಕ್ಷಿತ ಸ್ಥಳವೆಂದು ಎಲ್ಲರೂ ಪೊಲೀಸರ ಬಳಿ ಅಥವಾ ಪೊಲೀಸ್ ಠಾಣೆಗೆ ಹೋಗುತ್ತಾರೆ. ಜಗತ್ತಿನಲ್ಲಿ ಯಾವ ಮುಖ್ಯಮಂತ್ರಿಯೂ ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದು ಹೇಳಿಕೆ ನೀಡಿಲ್ಲ. ಆದರೆ ಕರ್ನಾಟಕದಲ್ಲಿ ಠಾಣೆಯಲ್ಲೇ ರಕ್ಷಣೆ ಇಲ್ಲವೆಂದರೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

click me!