ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ: ಸಚಿವ ಮುನಿಯಪ್ಪ

Published : Jul 16, 2024, 10:10 AM IST
ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ: ಸಚಿವ ಮುನಿಯಪ್ಪ

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪಾತ್ರವಿಲ್ಲ. ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದ್ದು ತನಿಖೆಯ ನಂತರವಷ್ಟೇ ವಾಸ್ತವಾಂಶಗಳು ಹೊರಬರಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಕೋಲಾರ (ಜು.16): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪಾತ್ರವಿಲ್ಲ. ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದ್ದು ತನಿಖೆಯ ನಂತರವಷ್ಟೇ ವಾಸ್ತವಾಂಶಗಳು ಹೊರಬರಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದ ಕುರುಬರಪೇಟೆಯ ಮುನೇಶ್ವರ ದೇವಾಲಯದ ದೀಪೋತ್ಸವ ಕಾರ್ಯಕ್ರಮದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗಣರದ ಬಗ್ಗೆ ಇಡಿ ಸಂಸ್ಥೆಯಿಂದ ವಿಚಾರಣೆ ನಡೆಯುತ್ತಿದ್ದು ಕಾನೂನು ಪ್ರಕಾರ ಏನಿದೆಯೋ ಅದನ್ನು ಇಡಿ ತನಿಖೆ ನಡೆಸಲಿದ್ದಾರೆ. ಯಾವುದೇ ವಿಷಯದ ಬಗ್ಗೆ ವಿಚಾರಣೆ ನಡೆಯವ ಸಂದರ್ಭದಲ್ಲಿ ಈಗಲೇ ಅಂತಿಮ ನಿರ್ಧಾರ ಹೇಳಲು ಬರುವುದಿಲ್ಲ ಎಂದರು.

ಮಳೆಗೆ ಪ್ರಾರ್ಥಿಸಿ ಗೋರಿಯ ಶವದ ಬಾಯಿಗೆ ನೀರು ಬಿಡ್ತಾರೆ: ವಿಜಯಪುರದಲ್ಲಿ ಮಳೆಗಾಗಿ ಭಯಾನಕ ಆಚರಣೆ!

ಟೀಕಿಸುವುದೇ ಪ್ರತಿಪಕ್ಷದ ಕೆಲಸ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣವು ತನಿಖೆ ಹಂತದಲ್ಲಿ ಇರುವುದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರಕಾರಕ್ಕೆ ಬರುವುದಿಲ್ಲ, ಆದರೆ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರಗಳೊಂದಿಗೆ ರಾಜಕಾರಣ ಮಾಡುವುದನ್ನು ಬಿಟ್ಟು ಸುಮ್ಮನೆ ಆಡಳಿತದ ಪಕ್ಷದ ವಿರುದ್ದ ಮಾತಾಡುವುದೇ ಅವರ ಕೆಲಸವಾಗಿದೆ ಎಂದು ಹೇಳಿದರು.

ಸಿಎಂ ಬದಲಾವಣೆ ಇಲ್ಲ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸುಮಾರು ೪.೫ ಕೋಟಿ ಜನ ನೆಮ್ಮದಿಯಿಂದ ಬದುಕುವ ವಾತಾವರಣ ಕಾಂಗ್ರೆಸ್ ಸರ್ಕಾರ ಮಾಡಿಕೊಟ್ಟಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯಿಂದ ಅನುಕೂಲವಾಗುವಂತೆ ಮಾಡಿದ್ದಾರೆ. ಇಂತಹ ಪವಿತ್ರವಾದ ಕೆಲಸವನ್ನು ಕಾಂಗ್ರೆಸ್ ಸರಕಾರದಿಂದ ಮಾತ್ರವೇ ಸಾಧ್ಯ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ ಅವರು ಅಂತಹ ತೀರ್ಮಾನ ಇನ್ನೂ ನಡೆದಿಲ್ಲ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.

ಮಲೆನಾಡಿನಲ್ಲಿ ಮಳೆ ಬಿರುಸು: ರೀಲ್ಸ್ ಮಾಡಿದ ಹುಚ್ಚಿಗೆ ರಸ್ತೆ ಸಂಪೂರ್ಣ ಹಾಳು, ಐವರು ಪೊಲೀಸ್ ವಶಕ್ಕೆ!

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ವಕ್ತಾರ ಎಲ್.ಎ.ಮಂಜುನಾಥ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಒಬಿಸಿ ಮಂಜುನಾಥ್, ಕೆ.ಆರ್.ತ್ಯಾಗರಾಜ್, ದೇವುಡು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ