ಬಡವರ ಮನೆಗಳಿಗೆ ಸಿಎಂ ಸಿದ್ದರಾಮಯ್ಯ ಜಿಎಸ್‌ಟಿ ಹಾಕಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್

Published : Nov 05, 2025, 06:15 PM IST
Siddaramaiah Zameer Ahmed Khan

ಸಾರಾಂಶ

ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಶಿಗ್ಗಾಂವಿ (ನ.05): ಕಳೆದ ಒಂದು ವರ್ಷದಿಂದ ಹಿಂದೆಂದೂ ಕಾಣದ ಅಭಿವೃದ್ಧಿ ಕಾಮಗಾರಿ ನಡೆದಿವೆ. ಹೀಗಾಗಿ ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಶಾಸಕ ಪಠಾಣ ಅವರು ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ವಹಿಸಿದ್ದಾರೆ. ಶಿಗ್ಗಾಂವಿ, ಸವಣೂರ ಹಾಗೂ ಬಂಕಾಪುರ ಪಟ್ಟಣಗಳಿಗೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗಾಗಿ ಸುಮಾರು ₹350 ಕೋಟಿ ಅನುದಾನ ತಂದಿದ್ದಾರೆ ಎಂದರು.

ಬಿದ್ದ ಮನೆಗಳಿಗೆ ಹಿಂದೆ ಬಿಡುಗಡೆಯಾದ ಹಣದಲ್ಲಿ ಜಿಎಸ್‌ಟಿ ಹಾಕುವುದು ಬೇಡ ಎಂದರು ಕೇಳಲಿಲ್ಲ. ಆದರೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಮನೆಗಳಿಗೆ ಜಿಎಸ್‌ಟಿ ಹಾಕಿಲ್ಲ. ಅದರಿಂದಾಗಿ ಸ್ಥಗಿತಗೊಂಡಿರುವ ಮನೆಗಳನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ದಿವಾಳಿ ಆಗಲಿದೆ ಎಂದು ವಿರೋಧಿಸಿದವರು ಇಂದು ಒಪ್ಪುವಂತಾಗಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಅದರಿಂದಾಗಿ ಜನ ಕಾಂಗ್ರೆಸ್ ಸರ್ಕಾರವನ್ನು ಮರೆಯದಂತಾಗಿದೆ ಎಂದರು.

ಅಭಿವೃದ್ಧಿಗೆ ಆದ್ಯತೆ

ಅಲ್ಪಸಂಖ್ಯಾತರ ಇಲಾಖೆಯಡಿ ಅಭಿವೃದ್ಧಿ ಯೋಜನೆಗಳಿಗೆ ಸುಮಾರು ₹ 4.5 ಸಾವಿರ ಕೋಟಿ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಅವರು ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ಮತದಾರರು ಒಂದು ಕ್ಷೇತ್ರದಲ್ಲಿನ ಬದಲಾವಣೆ ಬಯಸಿ ಆಯ್ಕೆ ಮಾಡುತ್ತಾರೆ. ನಂತರ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮರು ಆಯ್ಕೆ ಮಾಡುತ್ತಾರೆ. ಹೀಗಾಗಿ ಜನಪ್ರತಿನಿದಿಗಳು ಜನರ ನಡುವೆ ಇರಬೇಕು. ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸಬೇಕು. ಒಳ್ಳೆಯ ಜನ ಮೆಚ್ಚುವ ಕಾರ್ಯಗಳನ್ನು ಮಾಡುವ ಮೂಲಕ ಜನರಮನದಲ್ಲಿ ನೆಲೆಸಿರಿ ಎಂದ ಅವರು ಕಳೆದ ೫ ಬಾರಿಯಿಂದ ಸತತವಾಗಿ ನಮ್ಮ ಕ್ಷೇತ್ರದ ಜನ ಆಯ್ಕೆ ಮಾಡಿದ್ದಾರೆ. ಅದಕ್ಕೆ ಜನಪರ ಅಭಿವೃದ್ಧಿ ಕಾರ್ಯಗಳು ಕಾರಣವಾಗಿವೆ. ತಾವು ಸಹ ಉತ್ತಮ ಕಾರ್ಯಗಳನ್ನು ಮಾಡಬೇಕು ಎಂದರು.

ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚುನಾವಣೆ ಪೂರ್ವದಲ್ಲಿ ಸಚಿವ ಜಮೀರಅಹ್ಮದಖಾನ್ ಅವರು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಹಕರಿಸಿದ್ದಾರೆ. ತಮ್ಮ ಇಲಾಖೆ ಮೂಲಕ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ ಎಂದರು. ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಸವಣೂರ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಪುರಸಭೆ ಸದಸ್ಯರಾದ ಗೌಸಖಾನ್ ಮುನಸಿ, ವಸಂತಾ ಬಾಗೂರ ಮುಖಂಡರಾದ ಅಲ್ತಾಪ್ ಹಳ್ಳೂರ, ಎಂ.ಎಂ. ಪಠಾಣ, ಅಣ್ಣಪ್ಪ ಲಮಾಣಿ, ವೀರೇಶ ಆಜೂರ, ಶಂಭು ನೇತ್ರಾಜ, ಶಂಭಣ್ಣ ಆಜೂರ, ಹನುಮರೆಡ್ಡಿ ನಡುವಿನಮನಿ, ಕರಿಂಸಾಬ ಮೊಗಲಲ್ಲಿ, ಚಂದ್ರು ಕೊಡ್ಲಿವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ