ಜಿಎಸ್‌ಟಿಯಲ್ಲಿ ಸೋರಿಕೆಯಾಗುತ್ತಿದೆ. ಅದನ್ನು ತಡೆಯುವಲ್ಲಿಯೂ ಮುಖ್ಯಮಂತ್ರಿ ವಿಫಲರಾಗಿದ್ದು, ಸುಮ್ಮನೆ ಕೂತಿದ್ದಾರೆ. ಸರಿಯಾಗಿ ನಿರ್ವಹಣೆ ಮಾಡಿದರೆ ಇಲ್ಲೇ ಸಾಕಷ್ಟು ಆದಾಯ ಬರುತ್ತದೆ ಎಂದ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ(ಜೂ.22): ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಅವರು ಆರ್ಥಿಕ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಎಸ್‌ಟಿಯಲ್ಲಿ ಸೋರಿಕೆಯಾಗುತ್ತಿದೆ. ಅದನ್ನು ತಡೆಯುವಲ್ಲಿಯೂ ಮುಖ್ಯಮಂತ್ರಿ ವಿಫಲರಾಗಿದ್ದು, ಸುಮ್ಮನೆ ಕೂತಿದ್ದಾರೆ. ಸರಿಯಾಗಿ ನಿರ್ವಹಣೆ ಮಾಡಿದರೆ ಇಲ್ಲೇ ಸಾಕಷ್ಟು ಆದಾಯ ಬರುತ್ತದೆ ಎಂದು ಹೇಳಿದ್ದಾರೆ.
undefined
ರಾಜ್ಯದಲ್ಲಿ ವರ್ಷದಲ್ಲಿ ಚುನಾವಣೆ ಸಾಧ್ಯತೆ ಇದೆ: ಬೊಮ್ಮಾಯಿ ಭವಿಷ್ಯ
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲೆ ಹೊರೆ ಹಾಕುವುದಲ್ಲ. ನಿಮ್ಮ ಆಡಳಿತ ಬಿಗಿ ಮಾಡಿ, ಸಂಪನ್ಮೂಲ ಕ್ರೋಢೀಕರಿಸಬೇಕು. ಅದರ ಬದಲು ಅಭಿವೃದ್ಧಿ ಶೂನ್ಯ ಮಾಡಿ ಜನರ ಮೇಲೆ ತೆರಿಗೆ ಹಾಕಿದರೆ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.