ವಿಕಸಿತ ಭಾರತ್ ಯಾತ್ರೆಗೆ ಹೋಗದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ? ಬಿಜೆಪಿ ಆರೋಪವೇನು?

By Kannadaprabha News  |  First Published Jan 6, 2024, 8:40 AM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ದೇಶಾದ್ಯಂತ ನಡೆಯುತ್ತಿದ್ದು, ಯಾತ್ರೆಯ ನೋಡೆಲ್‌ ಅಧಿಕಾರಿಗಳಿಗೆ ಸಮಾರಂಭದಲ್ಲಿ ಭಾಗವಹಿಸದಂತೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ಹೋಗಿದೆ ಎಂಬ ಮಾಹಿತಿ ಇದೆ ಎಂದು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.


ಬೆಂಗಳೂರು (ಜ.6) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ದೇಶಾದ್ಯಂತ ನಡೆಯುತ್ತಿದ್ದು, ಯಾತ್ರೆಯ ನೋಡೆಲ್‌ ಅಧಿಕಾರಿಗಳಿಗೆ ಸಮಾರಂಭದಲ್ಲಿ ಭಾಗವಹಿಸದಂತೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ಹೋಗಿದೆ ಎಂಬ ಮಾಹಿತಿ ಇದೆ ಎಂದು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. 

Tap to resize

Latest Videos

ಕೇಂದ್ರ ಸರ್ಕಾರದ ಯೋಜನೆಗಳು ಕಡುಬಡವರಿಗೂ ದೊರೆಯಲಿ: ಸಚಿವ ಕ್ರಿಶನ್‌ ಪಾಲ್‌

ಮುಖ್ಯಮಂತ್ರಿ ಕಚೇರಿಯಿಂದ ಮೌಖಿಕ ಸಂದೇಶ ಹೋಗಿರುವ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಸಹ ಆತಂಕ ಪಡುತ್ತಿದ್ದಾರೆ. ಯಾತ್ರೆಯ ಸದುದ್ದೇಶ ಮತ್ತು ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವುದಾಗಿದೆ. ಹೀಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ಮತ್ತು ಯಾತ್ರೆಯ ನೋಡೆಲ್‌ ಅಧಿಕಾರಿಗಳಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದ್ದಾರೆ.

 

ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ: ಕೇಂದ್ರ ಸಚಿವ ಕ್ರಿಶನ್ ಪಾಲ್‌

ದೇಶಾದ್ಯಂತ ವಿಕಸಿತ್‌ ಭಾರತ್‌ ಯಾತ್ರೆ ನಡೆಯುತ್ತಿದ್ದು, ರಾಜ್ಯದಲ್ಲಿಯೂ 62 ವಾಹನಗಳು ಬಂದಿವೆ. ಅವುಗಳು ರಾಜ್ಯದ ಪ್ರತಿ ಗ್ರಾಮಪಂಚಾಯ್ತಿಗೆ ಹೋಗಿ ಕೇಂದ್ರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗುತ್ತಿದೆ. ಯೋಜನೆಯಿಂದ ವಂಚಿತ ರೈತರು, ಮಹಿಳೆಯರು, ಹಿಂದುಳಿದ ವರ್ಗದವರಿಗೆ ಬಹಳ ಅನುಕೂಲವಾಗಲಿದೆ ಎಂದಿದ್ದಾರೆ.

click me!