ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಲ್ಲ ಎಂಬ ವಿಶ್ವಾಸ ಇದೆ: ಸಚಿವ ಶಿವಾನಂದ ಪಾಟೀಲ

By Kannadaprabha News  |  First Published Sep 9, 2024, 6:25 PM IST

ಯಾರು ಬೇಕಾದವರು ಆಗಲಿ, ಕಾಂಗ್ರೆಸ್‌ನಲ್ಲಿ ಒಗ್ಗಟ್ಟಾಗಿದ್ದೇವೆ. ಯಾರೇ ಸಿಎಂ ಆದರೂ ಬೆಂಬಲವಿದೆ ಎಂದು ಜಾರಕಿಹೊಳಿ, ಪರಮೇಶ್ವರ ಹಾಗೂ ಇತರರು ಸಿಎಂ ಗಾದಿಗೆ ಪೈಪೋಟಿ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಉತ್ತರಿಸಿದರು.


ವಿಜಯಪುರ (ಸೆ.09): ಯಾರು ಬೇಕಾದವರು ಆಗಲಿ, ಕಾಂಗ್ರೆಸ್‌ನಲ್ಲಿ ಒಗ್ಗಟ್ಟಾಗಿದ್ದೇವೆ. ಯಾರೇ ಸಿಎಂ ಆದರೂ ಬೆಂಬಲವಿದೆ ಎಂದು ಜಾರಕಿಹೊಳಿ, ಪರಮೇಶ್ವರ ಹಾಗೂ ಇತರರು ಸಿಎಂ ಗಾದಿಗೆ ಪೈಪೋಟಿ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಉತ್ತರಿಸಿದರು. ಸಿಎಂ ಬದಲಾವಣೆ ಆಗ್ತಾರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಲ್ಲ ಎಂಬ ವಿಶ್ವಾಸ ಇದೆ. 

ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದರೆ ಯಾಕೆ ಬದಲಾವಣೆ ಆಗಬೇಕು ಎಂದರು. ಸಿಎಂಗಾಗಿ ಕಾಂಗ್ರೆಸ್‌ನಲ್ಲಿ ರೇಸ್ ವಿಚಾರವಾಗಿ ಮಾತನಾಡಿ, ಅದೆಲ್ಲಾ ಮಾಧ್ಯಮಗಳ ಸೃಷ್ಟಿ. ಅಭಿವೃದ್ಧಿ ಕೇಳೋದನ್ನು ವಿದ್ಯುನ್ಮಾನ ಮಾಧ್ಯಮಗಳು ಕೇಳಲ್ಲಾ, ಹೀಗಾಗೇ ನಾನು ಮಾಧ್ಯಮಗಳ ಮುಂದೆ ಬರಲ್ಲ ಎಂದರು. ನಾನು ಶಿವಾನಂದ ಪಾಟೀಲ್‌ಗಿಂತ ಸಿನಿಯರ್ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ ವಿಚಾರಕ್ಕೆ ಮಾತನಾಡಿದ ಅವರು, ಸಿದ್ದರಾಮಯ್ಯ ಇರೋವರೆಗೂ ಅವರೇ ಸಿಎಂ ಆಗಿರುತ್ತಾರೆ. ಪರಮೇಶ್ವರ ನಿವಾಸಕ್ಕೆ ಎಂ.ಬಿ.ಪಾಟೀಲ್ ಭೇಟಿ ನೀಡಿದರೆ ತಪ್ಪೇನು?. 

Tap to resize

Latest Videos

undefined

ಮುದ್ದು ಮಗನ ಆಸೆಯಂತೆ ಗಣೇಶ ಪ್ರತಿಷ್ಠಾಪಿಸಿದ ಮುಸ್ಲಿಂ ಕುಟುಂಬ: 5 ದಿ‌ನ ಮಾಂಸ ತಿನ್ನದೆ ಆರಾಧನೆ!

ಎಂ.ಬಿ.ಪಾಟೀಲ್ ಸಿಎಂ ಆದರೆ ನನ್ನ ಅಂಭ್ಯಂತರ ಇಲ್ಲ. ಈ‌ ನಿಟ್ಟಿನಲ್ಲಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಶಾಸಕರು ನಿರ್ಧಾರ ಮಾಡುತ್ತಾರೆ. ಆದರೆ ನನ್ನ ಹೇಳಿಕೆಯನ್ನು ಮಾಧ್ಯಮಗಳು ವಿವಾದ ಮಾಡಿವೆ ಎಂದು ಆರೋಪಿಸಿದರು. ಕೆಲವೊಬ್ಬರು ರಾಜಕಾರಣ ಮಾಡುವುದರಲ್ಲೇ ನಿರತರಾಗಿದ್ದಾರೆ. ನಾನು ಅಭಿವೃದ್ಧಿ ಮಾಡುವುದರಲ್ಲಿ ನಿರತ. ನನಗೆ ಮೂರು ಇಲಾಖೆಗಳಿಗೆ ಅಭಿವೃದ್ಧಿ ಬಿಟ್ಟು ಬೇರೆ ಮಾಡಿಲ್ಲ. ಯಾರು ಬೇಕಾದರೂ ಸಿಎಂ ಆಗಬಹುದು, ಅದರಲ್ಲೇನಿದೆ ಎಂದರು.

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ, ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆಂದು ಹೇಳಿಕೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಅವರು ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ ಎಂದರು. ಮುಡಾ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಕುರಿತು ಚರ್ಚೆ ಅನಗತ್ಯವಾಗಿದೆ. 

ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚಿಂತನೆ ನಡೆದಿಲ್ಲ. ನಮ್ಮಲ್ಲಿ ಹೈಕಮಾಂಡ್ ಇದ್ದು, ಶಾಸಕಾಂಗ ಸಭೆಯಲ್ಲಿ ನಿರ್ಣಯವಾಗಬೇಕು. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದವರಾಗಬೇಕು ಸಿಎಂ ಆಗಬೇಕು ಎಂಬ ವಿಚಾರ ಅಲ್ಲ. ಈ ಎಲ್ಲ ಪ್ರಶ್ನೆ ಉದ್ಭವಿಸುವುದು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಮೇಲೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲ. ಎಲ್ಲ ಶಾಸಕ, ಸಚಿವರು ಸಿದ್ದರಾಮಯ್ಯ ಅವರ ಪರವಾಗಿದ್ದಾರೆ ಎಂದು ಹೇಳಿದರು.

ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭ: ಸಚಿವ ಸತೀಶ್‌ ಜಾರಕಿಹೊಳಿ

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಕಳೆದ ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿಯನ್ನು ಭೇಟಿ‌ ಮಾಡಿಸಿದ್ದೇವೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕೊಡುವ ವಿಚಾರ ಬಂದಾಗ ಮುಖ್ಯಮಂತ್ರಿ ನಿರ್ಣಯ ತೆಗೆದುಕೊಳ್ಳುತ್ತಾರೆ. ಅಲ್ಲದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟಿರುವ 2ಡಿ ಮೀಸಲಾತಿ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಧ್ವನಿ ಎತ್ತುವಾಗ ಎಲ್ಲ ಸಮುದಾಯದವರು ಒಗ್ಗಟ್ಟಾಗಿ ಮೀಸಲಾತಿಗೆ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

click me!