ರಾಜ್ಯ ಸರ್ಕಾರ ಇದ್ದೂ ಸತ್ತಂತೆ, ಸಿದ್ದು ಈಗ ಅಲ್ಪಸಂಖ್ಯಾತರ ನಾಯಕ: ವಿಜಯೇಂದ್ರ ಟೀಕೆ

Published : Apr 08, 2025, 08:26 AM ISTUpdated : Apr 08, 2025, 08:29 AM IST
ರಾಜ್ಯ ಸರ್ಕಾರ ಇದ್ದೂ ಸತ್ತಂತೆ, ಸಿದ್ದು ಈಗ ಅಲ್ಪಸಂಖ್ಯಾತರ ನಾಯಕ: ವಿಜಯೇಂದ್ರ ಟೀಕೆ

ಸಾರಾಂಶ

ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಈಗ ಹಿಂದುಳಿದ ಮತ್ತು ದಲಿತರನ್ನು ಮರೆತು ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಸರ್ಕಾರ ಎಟಿಎಂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. 

ಮೈಸೂರು (ಏ.08): ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಈಗ ಹಿಂದುಳಿದ ಮತ್ತು ದಲಿತರನ್ನು ಮರೆತು ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಸರ್ಕಾರ ಎಟಿಎಂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. ನಗರದಲ್ಲಿ ಸೋಮವಾರ ರಾಜ್ಯ ಬಿಜೆಪಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿ,. ಆರಂಭದಲ್ಲಿ ನಾನು ಅಹಿಂದ ನಾಯಕ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ಈಗ ಕೇವಲ ಅಲ್ಪಸಂಖ್ಯಾತರ ನಾಯಕರಾಗಿದ್ದಾರೆ. ಅವರನ್ನು ಮಾತ್ರ ಓಲೈಸುವ ಕೆಲಸ ಮಾಡುತ್ತಿದ್ದಾರೆ. 

ಚುನಾವಣೆ ಬಂದಾಗ ಹೋರಾಟ ಮಾಡುವ ನಾಟಕವನ್ನು ಕಾಂಗ್ರೆಸ್‌ ಮಾಡುತ್ತದೆಯೇ ಹೊರತು ಬಿಜೆಪಿ ಅಲ್ಲ. ಚುನಾವಣೆ ಮುನ್ನ ಮೇಕೆದಾಟು ಪಾದಯಾತ್ರೆ ಮಾಡಿ, ಅಧಿಕಾರಕ್ಕೆ ಬಂದ ಕೂಡಲೇ ಯೋಜನೆ ಕೈಗೆತ್ತಿಕೊಳ್ಳುವುದಾಗಿ ಹೇಳಿ, ಈಗ ಮೌನವಾಗಿದ್ದಾರೆ ಎಂದರು. ಜನಪರ ಆಡಳಿತ ಕೊಡುವ ಬದಲಿಗೆ ಬೆಲೆ ಏರಿಸಿ ಸಂಕಷ್ಟಕ್ಕೆ ತಳ್ಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಷ್ಟು ಬಜೆಟ್ ಮಂಡಿಸಿದ್ದಾರೆ ಎನ್ನುವುದು ಮುಖ್ಯವಲ್ಲ. ನಾಡಿನ ಆರೂವರೆ ಕೋಟಿ ಜನರಿಗೆ ಏನು ಕೊಡುಗೆ ನೀಡಿದ್ದಾರೆ ಎಂಬುದು ಮುಖ್ಯ ಎಂದರು.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಆಗಿದ್ದಾಗ ಮೈಸೂರಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿದರು. ಕಾಂಗ್ರೆಸ್ ಸರ್ಕಾರ ಜನರ ಪಾಲಿಗೆ ಬದುಕಿದ್ದು ಸತ್ತಂತೆ ಆಗಿದೆ. ಹಾಲು, ಡೀಸೆಲ್, ವಿದ್ಯುತ್ ಮೊದಲಾದ ವಸ್ತುಗಳ ಬೆಲೆ ಹೆಚ್ಚಿಸಿದ್ದರಿಂದ ಜನರು ಕಣ್ಣೀರು ಹಾಕುವ ಸ್ಥಿತಿ ಬಂದಿದೆ. ಮುಸ್ಲಿಮರಿಗೆ ಶೇ. 4ರಷ್ಟು ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಿರುವ ಸಿದ್ದರಾಮಯ್ಯ ಅವರಿಗೆ ಹಿಂದೂಗಳಲ್ಲಿ ಬಡವರು ಇರುವುದು ಗೊತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ವಕ್ಫ್‌ ಮಸೂದೆ ಅಂಗೀಕಾರ ಐತಿಹಾಸಿಕ ಕ್ಷಣ.. ಮುಸ್ಲಿಮರೂ ವಿಧೇಯಕ ಸ್ವಾಗತಿಸಿದ್ದಾರೆ: ವಿಜಯೇಂದ್ರ

ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಹಿಂದುಳಿದ ವರ್ಗಗಳ ಸಮಾಜವನ್ನು ಮರೆತು ಬಿಟ್ಟಿದ್ದಾರೆ. ಎಸ್‌.ಸಿ.ಪಿ- ಟಿ.ಎಸ್‌.ಪಿ ಹಣವನ್ನು ಬೇರೆ ಕಡೆಗೆ ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತರ ನಾಯಕರಾಗಿದ್ದಾರೆ. ಎರಡು ವರ್ಷಗಳಿಂದ ಸಿದ್ದರಾಮಯ್ಯ ಅವರ ಆಡಳಿತ ಹಾದಿ ತಪ್ಪಿದೆ. ವಿಧಾನಸೌಧದಲ್ಲಿ ಕುಳಿತು ಮಜಾ ಮಾಡುವ ಆಡಳಿತ ನೀಡುತ್ತ, ಜನರ ಸಮಸ್ಯೆ ಬದಿಗೊತ್ತಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಮೆಚ್ಚುಗೆ ಗಳಿಸಲು ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕೆಲಸ ನಡೆದಿದೆ. ಇದಕ್ಕೆ ಎಂದಿಗೂ ಅವಕಾಶ ಕೊಡಲ್ಲ ಎಂದು ಅವರು ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ