
ಬೆಂಗಳೂರು (ಏ.22): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೇಲೆ ಕ್ರಮವಾಗುತ್ತಿದ್ದರೂ ಅಸಹಾಯಕರಾಗಿದ್ದಾರೆ ಎಂಬದರ ಕುರಿತು ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ಸಿಎಂಗೆ ಯಾರೋ ಮಾಟ ಮಾಡವ್ರೆ ಅನಿಸುತ್ತೆ: ಮಾಜಿ ಸಚಿವ ರಾಜಣ್ಣ ಹೇಳಿದ್ದೇನು?
‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಪಕ್ಷದಲ್ಲಿ ಮುಸ್ಲಿಮರಿಗೆ ಯಾವುದೇ ತಾರತಮ್ಯ ಆಗಿಲ್ಲ. ಒಬ್ಬರು ನನ್ನ ಪರ ಮಾತನಾಡುತ್ತಾರೆ. ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸಬೇಕಾಗಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.