ಬೆಂಗಳೂರಿನ ಕುಡಿಯುವ ನೀರಿಗೆ ಅನುಕೂಲವಾಗುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಕೊಡಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಸಂಸದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬೆಂಗಳೂರು (ಅ.17): ಬೆಂಗಳೂರಿನ ಕುಡಿಯುವ ನೀರಿಗೆ ಅನುಕೂಲವಾಗುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಕೊಡಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಸಂಸದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಬೆಂಗಳೂರಿನ 110 ಹಳಿಗಳಿಗೆ ಕಾವೇರಿ ನೀರು ಪೂರೈಕೆ ಮಾಡುವ ಕಾವೇರಿ 5ನೇ ಹಂತದ ಯೋಜನೆಯನ್ನು ಬುಧವಾರ ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಮೇಕೆದಾಟುಗೆ ಸಂಬಂಧಿಸಿದಂತೆ ಈಗಾಗಲೇ ಯೋಜನೆ ಸಿದ್ಧಪಡಿಸಿ ಕೇಂದ್ರದ ಅನುಮೋದನೆ ಸಲ್ಲಿಸಲಾಗಿದೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ.
ರಾಜ್ಯದಿಂದ ಆಯ್ಕೆಯಾದ ಬಿಜೆಪಿ, ಜೆಡಿಎಸ್ ಸಂಸದರುಹಾಗೂ ಕೇಂದ್ರ ಸಂಪುಟದಲ್ಲಿ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿ ಒಪ್ಪಿಗೆ ಕೊಡಿಸಲಿ ಎಂದು ಆಗ್ರಹಿಸಿದರು. ಮೇಕೆದಾಟು ಬ್ಯಾಲೆನ್ಸಿಂಗ್ ರಿಸರ್ವಾಯ ನಿರ್ಮಾಣದಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ರಾಜಕೀಯ ಕಾರಣಕ್ಕೆ ತಮಿಳುನಾಡುಕ್ಯಾತೆತೆಗೆದುವಿರೋಧಮಾಡುತ್ತಿದೆ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವುದಕ್ಕೆ ಸಾಧ್ಯವಾಗಲಿದೆ. ಹಾಗಾಗಿ, ಕೂಡಲೇ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.
3ನೇ ಪ್ರಯತ್ನದಲ್ಲಿ ತೆಂಗಿನ ಕಾಯಿ ಒಡೆದ ಡಿಸಿಎಂ ಡಿಕೆಶಿ: ಕಾವೇರಿ 5ನೇ ಹಂತದ ಯೋಜನೆ ಉದ್ಘಾಟನೆ ನಿಮಿತ್ತ ಏರ್ಪಡಿಸಿದ್ದ ಹೋಮ, ಹವನ, ಪೂಜಾ ಕಾರ ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಕಾಠ್ಯಕ್ರಮಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್, ತೆಂಗಿನ ಕಾಯಿ ಒಡೆಯಲು ಕಲ್ಲಿಗಾಗಿ ಹುಡುಕಾಟ ನಡೆಸಿದರು. ಇದನ್ನು ಅರಿತ ಸಿಬ್ಬಂದಿ ಕಲ್ಲಿನ ವ್ಯವಸ್ಥೆಗೆ ಮುಂದಾದರು.
ಒಳಮೀಸಲಿಗೆ ಅಡ್ಡಿ ಇದೆ, ಯಾರಿಂದ ಅಂತ ಗೊತ್ತಿಲ್ಲ: ಎಚ್.ಆಂಜನೇಯ ಸಂದರ್ಶನ
ಆ ವೇಳೆ ದೀಪ ಬೆಳಗುವ ಕಾರ್ಯ ಮುಕ್ತಾಯಗೊಳಿಸಿದ ಡಿ.ಕೆ.ಶಿವಕುಮಾರ್ ವೇದಿಕೆ ಮುಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದ ದೊಡ್ಡ ಕಲ್ಲಿಗೆ ವೇದಿಕೆ ಮೇಲಿನಿಂದ ತೆಂಗಿನ ಕಾಯಿ ಒಡೆಯುವ ಪ್ರಯತ್ನ ನಡೆಸಿದರು. ಎರಡು ಬಾರಿ ವಿಫಲರಾದರು. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಎಲ್ಲರ ನಗುವಿಕೆಗೆ ಕಾರಣವಾಯಿತು. ಅಂತಿಮವಾಗಿ 3ನೇ ಬಾರಿ ತೆಂಗಿನಜಾಯಿ ಒಡೆಯುವಲ್ಲಿ ಶಿವಕುಮಾರ್ ಯಶಸ್ವಿಯಾದರು.