ಕಾಂಗ್ರೆಸ್‌ ಬ್ಯಾಂಕ್‌ ಖಾತೆ ಸ್ಥಗಿತಕ್ಕೆ ಸಿಎಂ ಆಕ್ರೋಶ: ದುಷ್ಟಶಕ್ತಿ ಕೈವಾಡ ಎಂದ ಸಿದ್ದರಾಮಯ್ಯ!

By Kannadaprabha News  |  First Published Mar 22, 2024, 8:55 AM IST

‘ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ. ಚುನಾವಣಾ ಆಯೋಗವು ಕೂಡಲೇ ಈ ಕಾನೂನು ಬಾಹಿರ ಕ್ರಮವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
 


ಬೆಂಗಳೂರು (ಮಾ.22): ‘ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ. ಚುನಾವಣಾ ಆಯೋಗವು ಕೂಡಲೇ ಈ ಕಾನೂನು ಬಾಹಿರ ಕ್ರಮವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿರುವ ‘ದುಷ್ಟ ಶಕ್ತಿ’, ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ. ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆ. ಜನರೇ ಚುನಾವಣೆ ಮೂಲಕ ಇವರಿಗೆ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.

Tap to resize

Latest Videos

ಬಿಜೆಪಿ ರೆಬೆಲ್ಸ್‌ ಎಸ್ಟಿಎಸ್‌, ಹೆಬ್ಬಾರ್‌ರಿಂದ ಡಿ.ಕೆ.ಶಿವಕುಮಾರ್‌ ಭೇಟಿ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣಾ ಬಾಂಡ್ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರು.ಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದಿದ್ದಾರೆ. ಇನ್ನು ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಪ್ರಶ್ನಿಸಿದ್ದಾರೆ.

ಭಯದಿಂದ ಖಾತೆ ಸ್ಥಗಿತ: ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಮುಂದೆ ಬೇಷರತ್‌ ಕ್ಷಮೆ ಯಾಚಿಸಿದ ಬಾಬಾ ರಾಮ್‌ದೇವ್‌ರ ಪತಂಜಲಿ!

ಮೋದಿ ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು ‘ದುಷ್ಟ ಶಕ್ತಿ’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿ ಹೇಳಿರುವುದು ಸರಿಯಾಗಿದೆ. ಈ ದುಷ್ಟ ಶಕ್ತಿ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಹೇಳಿದ್ದಾರೆ.

click me!