ಮುಡಾ ಹಗರಣದ ಚೆಂಡು ಕಾನೂನು ಅಂಗಳಕ್ಕೆ ಹೋಗಿದ್ದು, ಕಾನೂನು ಮೂಲಕವೇ ಇದು ಇತ್ಯರ್ಥ ಆಗಬೇಕು. ಏನೆಲ್ಲ ಬೆಳವಣಿಗೆ ಆಗುತ್ತವೆ ನೋಡಬೇಕು. ಹೈಕೋರ್ಟ್‌ನಲ್ಲಿ ಏನು ತೀರ್ಮಾನ ಆಗುತ್ತದೆ ನೋಡಿಕೊಂಡು ಅದರ ಆಧಾರದ ಮೇಲೆ ಮುಂದಿನ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ(ಆ.25): ಮುಡಾ ಹಗರಣ ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ತಯಾರಿ ಮಾಡುತ್ತಿದ್ದಾರೆ. ಆದರೆ ಪರೇಡ್ ಮಾಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ಈಗಾಗಲೇ ಕಾನೂನು ಹೋರಾಟ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಡಾ ಹಗರಣದ ಚೆಂಡು ಕಾನೂನು ಅಂಗಳಕ್ಕೆ ಹೋಗಿದ್ದು, ಕಾನೂನು ಮೂಲಕವೇ ಇದು ಇತ್ಯರ್ಥ ಆಗಬೇಕು. ಏನೆಲ್ಲ ಬೆಳವಣಿಗೆ ಆಗುತ್ತವೆ ನೋಡಬೇಕು. ಹೈಕೋರ್ಟ್‌ನಲ್ಲಿ ಏನು ತೀರ್ಮಾನ ಆಗುತ್ತದೆ ನೋಡಿಕೊಂಡು ಅದರ ಆಧಾರದ ಮೇಲೆ ಮುಂದಿನ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಲಪಂಥೀಯರು ಬಡವರ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
ಜಿಂದಾಲ್‌ಗೆ ಕಡಿಮೆ ದರಕ್ಕೆ ಜಮೀನು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ರೀತಿ, ವಿರೋಧ ಪಕ್ಷದಲ್ಲಿದ್ದಾಗ ಮತ್ತೊಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಸಚಿವ ಸಂಪುಟದಲ್ಲಿ ಮತ್ತು ಸಾರ್ವಜನಿಕವಾಗಿ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಇದಕ್ಕೆ ವಿರೋಧ ಬಂದಾಗ ನಾವೂ ಸಹ ಸಚಿವ ಸಂಪುಟದಲ್ಲಿ ಹಿಂದೆ ಪಡೆದುಕೊಂಡೆವು. ಆಗ ಇದೇ ಕಾಂಗ್ರೆಸ್‌ನವರು ಇದಕ್ಕೆ ಭಾರೀ ವಿರೋಧ ಮಾಡಿದ್ದರು. ಈಗ ಇವರೇ ಪರಭಾರೆ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.