ಸಚಿವ ಸ್ಥಾನ ನೀಡಲು ಸಿಎಂ ಭರವಸೆ ನೀಡಿದ್ದಾರೆ: ಶಾಸಕ ಪುಟ್ಟರಂಗಶೆಟ್ಟಿ

Published : Oct 24, 2023, 07:02 AM IST
ಸಚಿವ ಸ್ಥಾನ ನೀಡಲು ಸಿಎಂ ಭರವಸೆ ನೀಡಿದ್ದಾರೆ: ಶಾಸಕ ಪುಟ್ಟರಂಗಶೆಟ್ಟಿ

ಸಾರಾಂಶ

ಸಿಎಂ ಸಿದ್ದರಾಮಯ್ಯ ‘ಜೂನ್‌ನಲ್ಲಿ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ’ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೊದಲು ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಅದರೆ ನಾನೇ ಒಪ್ಪಲಿಲ್ಲ. ಆದರೆ ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರ ವಾಗಿದ್ದು, ಬಲವಂತ ಮಾಡಲು ನಾನ್ಯಾರು?’ ಎಂದ ಶಾಸಕ ಸಿ.ಪುಟ್ಟರಂಗಶೆಟ್ಟಿ   

ಚಾಮರಾಜನಗರ(ಅ.24): ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ‘ಜೂನ್‌ನಲ್ಲಿ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ’ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೊದಲು ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಅದರೆ ನಾನೇ ಒಪ್ಪಲಿಲ್ಲ. ಆದರೆ ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರ ವಾಗಿದ್ದು, ಬಲವಂತ ಮಾಡಲು ನಾನ್ಯಾರು?’ ಎಂದರು.

ನಮ್ಮದು ಪ್ರಪಂಚದಲ್ಲೇ ಮಾದರಿ ಸರ್ಕಾರ: ಸಚಿವ ಕೃಷ್ಣ ಬೈರೇಗೌಡ

ಸಿದ್ದು-ಡಿಕೆಶಿ ಒಂದೇ:

ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಇನ್ನು ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಎಲ್ಲಾ ಹಂತದಲ್ಲೂ ಒಗ್ಗಟ್ಟಾಗಿಯೇ ಹೋಗುತ್ತಿದ್ದಾರೆ. ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಒಟ್ಟಾಗಿಯೇ ಭಾಗವಹಿಸುತ್ತಿದ್ದಾರೆ. ಅವರಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಕೇವಲ ವಿರೋಧ ಪಕ್ಷಗಳ ಆರೋಪವಷ್ಟೇ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ