
ಬೆಂಗಳೂರು (ಜು.5): ಮುಡಾ ಪ್ರಕರಣ ಸಿಎಂ ಖುರ್ಚಿಗೆ ಟವಲ್ ಹಾಕಿದವರಿಂದಲೇ ಬಹಿರಂಗ ಆಗಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಇದನ್ನು ಜಿ ಟಿ ದೇವೆಗೌಡರಿಗೆ ಹೋಗಿ ಕೇಳೊಕೆ ಹೇಳಿ ಎಂದು ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಕುಮಾರಸ್ವಾಮಿಗೆ ಇದನ್ನ ಜಿ ಟಿ ದೇವೆಗೌಡರಿಗೆ ಹೋಗಿ ಕೇಳೊಕೆ ಹೇಳಪ್ಪ, ಅವರು ಮೆಂಬರ್ ಇದ್ದಾರೆ, ಅವರನ್ನ ಕೇಳು ಅನ್ನು ಮೊದಲು ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಜಯನಗರ ಮೂಲದ ವಿವಾಹಿತೆ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ!
ಮುಡಾ ಸೈಟ್ ಹಗರಣ, ತನಿಖೆ ಆರಂಭ
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.
ರಾಜ್ಯ ಸರ್ಕಾರ ನಗರಾಭಿವೃದ್ಧಿ ಇಲಾಖೆ ಆಯುಕ್ತ ಆರ್.ವೆಂಕಟಾಚಲಪತಿ ಮತ್ತು ನಗರ ಯೋಜನೆ ವಿಭಾಗದ ನಿರ್ದೇಶಕ ಎಂ.ಸಿ.ಶಶಿಕುಮಾರ್, ಜಂಟಿ ನಿರ್ದೇಶಕಿ ಶಾಂತಲಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಳಗ್ಗೆ 11.45ರ ಸುಮಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆಗಮಿಸಿದ ತನಿಖಾ ತಂಡ ವಿಶೇಷ ಭೂ ಸ್ವಾಧೀನಾಧಿಕಾರಿಯಿಂದ ಅಗತ್ಯ ಮಾಹಿತಿ ಕಲೆ ಹಾಕಿದರು.
ಜತೆಗೆ ಎಂಡಿಎ ಅಧಿಕಾರಿಗಳು, ವಿಶೇಷ ಭೂ ಸ್ವಾಧೀನಾಧಿಕಾರಿಗಳು, ನಗರ ಯೋಜನೆ ಸದಸ್ಯರು, ಮುಖ್ಯ ಲೆಕ್ಕಾಧಿಕಾರಿ, ಎಂಜಿನಿಯರ್‌ಗಳು, ಸರ್ವೇಯರ್‌ಗಳ ಜತೆ ಸಭೆ ನಡೆಸಿದರು.
ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಹೆಚ್‌ಡಿಕೆ ಸ್ಫೋಟಕ ಹೇಳಿಕೆ!
2020ರಿಂದ ಈಚೆಗಿನ ನಿವೇಶನ ಹಂಚಿಕೆ ಮತ್ತು ಭೂ ಸ್ವಾಧೀನ ಕುರಿತು ಮಾಹಿತಿ ಕಲೆ ಹಾಕಿದರು. ನಾಲ್ಕು ವಾರಗಳಲ್ಲಿ ಸರ್ಕಾರ ವರದಿ ಕೇಳಿರುವುದರಿಂದ ತನಿಖೆ ಚುರುಕುಗೊಂಡಿದೆ.
ಎಂಡಿಎ ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ರಘುನಂದನ್, ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದ್ದರು. ಈವರೆಗೆ ಕ್ರಮವಾಗಿ ಈ ಸ್ಥಾನದಲ್ಲಿದ್ದ ಜಿ.ಟಿ.ದಿನೇಶ್ ಕುಮಾರ್ ಹಾಗೂ ಜಿ.ಡಿ.ಶೇಖರ್ ರನ್ನು ನಿವೇಶನ ಹಗರಣದ ಹಿನ್ನೆಲೆಯಲ್ಲಿ ಎತ್ತಂಗಡಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.