ಮುಡಾ, ವಾಲ್ಮೀಕಿ ಹಗರಣ ಸಂಬಂಧ ಸಿಎಂ ರಾಜೀನಾಮೆ ನೀಡಬೇಕು: ಸಂಸದ ಗೋವಿಂದ ಕಾರಜೋಳ

By Kannadaprabha News  |  First Published Jul 15, 2024, 12:23 AM IST

ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ. 


ದಾವಣಗೆರೆ (ಜು.15): ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಖಜಾನೆಯಿಂದಲೇ ಹಣ ಬಿಡುಗಡೆಯಾಗಿರುವುದು ಸ್ಪಷ್ಟವಾಗಿದೆ. ವಾಲ್ಮೀಕಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಭಾಗಿಯಾದವರು ತಮ್ಮನ್ನು ತಾವು ಸಾಚಾಗಳೆಂದು ಸಾಬೀತುಪಡಿಸಲು ಕಾಲಾವಕಾಶ ಕೇಳಿದ್ದಾರೆ ಎಂದರು.

ಹಗರಣ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯಾಗಿದ್ದು, ಸ್ವಾತಂತ್ರ್ಯಾ ನಂತರ ಆಡಳಿತ ಮಾಡಿದ ಕಾಂಗ್ರೆಸ್‌ ಸರ್ಕಾರದ ಹಾಲಿ-ಮಾಜಿ ಸಚಿವರು, ಶಾಸಕರು ಸುಮಾರು ₹60 ಲಕ್ಷ ಕೋಟಿಗಿಂತಲೂ ಅದಿಕ ಹಗರಣ ಮಾಡಿ, ಜೈಲು ಪಾಲಾಗಿದ್ದಾರೆ. ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಅವರು ಟೀಕಿಸಿದರು.

Tap to resize

Latest Videos

undefined

ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕೆಲಸ ಮಾಡದೇ, ಭ್ರಷ್ಟಾಚಾರದಲ್ಲಿ ಮತ್ತು ಸ್ವಜನಪಕ್ಷಪಾತದಲ್ಲೇ ತೊಡಗಿದೆ. ಸಾಚಾ ಎಂಬುದಾಗಿ ಹೇಳಿಕೊಳ್ಳುತ್ತಿದ್ದವರೇ ಇಂದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸರ್ಕಾರದಿಂದಲೇ ಬ್ಯಾಂಕ್ ದರೋಡೆಯಾಗಿದ್ದು, ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಆಗಿರಲಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ ಇರುವುದರಿಂದ ಇಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಅಧಿಕಾರಿಗಳಿಗೆ ಶಾಸಕ ಬಸವರಾಜ ರಾಯರಡ್ಡಿ ಎಚ್ಚರಿಕೆ

ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ್ದವರನ್ನು ಬಂಧಿಸಲಾಗಿದೆ. ಬ್ಯಾಂಕ್ ದರೋಡೆಯಲ್ಲಿ ರಾಜ್ಯ ಸರ್ಕಾರದ ಸಚಿವರೇ ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸರ್ಕಾರದ ಖಜಾನೆಯಿಂದ ಹಣ ಬಿಡುಗಡೆಯಾಗಿದ್ದರಿಂದ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳಲು, ಉಳಿಸಲು ಯಾವುದೇ ನೈತಿಕತೆಯೂ ಇಲ್ಲ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಮೊದಲು ರಾಜೀನಾಮೆ ನೀಡಲಿ ಎಂದು ಗೋವಿಂದ ಕಾರಜೋಳ ಕಿವಿಮಾತು ಹೇಳಿದರು.

click me!