
ಮೈಸೂರು(ಅ.26): ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ತಮ್ಮನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಬರದ ಸಂದರ್ಭದಲ್ಲಿ ನಾನು ಕ್ರಿಕೆಟ್ ನೋಡಲು ಹೋಗಿದ್ದೆ ಎಂದು ಟೀಕಿಸುವ ಅವರು ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವಾಗ ಅಮೆರಿಕಕ್ಕೆ ಹೋಗಿ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್‌ಎಂಡ್‌ನಲ್ಲಿ ಕಾಲಕಳೆಯುತ್ತಿದ್ದರು. ಇವರು ಸರ್ಕಾರ ನಡೆಸುವ ಬಗ್ಗೆ ನಮಗೆ ಹೇಳಿಕೊಡಬೇಕೇ? ಎಂದರು.
ಸಿದ್ದರಾಮಯ್ಯ ಹಿಂದೂ ವಿರೋಧಿ: ಪ್ರಮೋದ್ ಮುತಾಲಿಕ್
ತಪ್ಪುದಾರಿಗೆಳೆಯುತ್ತಿದ್ದಾರೆ: ಕುಮಾರಸ್ವಾಮಿ ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಬೇಕಿದ್ದರೆ ಅದನ್ನು ಬಿಡುಗಡೆ ಮಾಡುತ್ತೇನೆ. ಆದರೆ ಅವರು ಈಗ ಬೇರೆ ರೀತಿ ಮಾತನಾಡುತ್ತಿದ್ದಾರೆ. ವಿಧಾನಮಂಡಲವನ್ನು ತಪ್ಪುದಾರಿಗೆಳೆಯುತ್ತಿದ್ದಾರೆ ಎಂದರು.
ಆರ್ಥಿಕತೆ ಬಗ್ಗೆ ಶ್ವೇತಪತ್ರ ಮಂಡಿಸುವೆ-ಸಿಎಂ:
ಬಿಜೆಪಿಯವರು ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್‌ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ. ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ತಿಳಿಸಿದರು.
ರಾಮನಗರ ಬೆಂಗಳೂರಿಗೆ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ
ಮೈಸೂರು: ರಾಮನಗರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು, ಈ ಪ್ರಶ್ನೆಯನ್ನು ಅವರನ್ನೇ ಕೇಳಿ. ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಅವರ ಬಳಿ ಚರ್ಚಿಸುತ್ತೇನೆ ಎಂದರು. ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದ ಅವರು, ಶಾಸಕರು ಸಚಿವರಾಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.