
ಮೈಸೂರು(ಜ.11): ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಇದೆ. ಮಹಜರ್ ಮಾಡಿ ತೆಗೆದುಕೊಂಡು ಬರುತ್ತಾರೆ. ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಕ್ಸಲರು ಸಿಎಂ ಕಚೇರಿಯಲ್ಲಿ ಶರಣಾಗಿರುವುದಕ್ಕೆ ಬಿಜೆಪಿ ವಿರೋಧಕ್ಕೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ನಕ್ಸಲಿಸಂ ನಮ್ಮ ರಾಜ್ಯದಲ್ಲಿ ಇರಬಾರದು ಎಂಬುದು ನಮ್ಮ ಉದ್ದೇಶ, ಯಾವುದೇ ಹೋರಾಟ ಶಾಂತಿಯುತವಾಗಿರಬೇಕು. ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಯಬಾರದು ಎಂಬುದು ನಮ್ಮ ಉದ್ದೇಶ, ಅನ್ಯಾಯ, ಶೋಷಣೆಗಳನ್ನ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ ಎಂದರು.
ನಕ್ಸಲರ ಶಸ್ತ್ರಾಸ್ತ್ರ ಎಲ್ಲಿದೆ ಅಂತ ಗೊತ್ತು: ಸಿಎಂ ಸಿದ್ದರಾಮಯ್ಯ
ಶೃಂಗೇರಿಯಲ್ಲಿ ಇನ್ನೊಬ್ಬ ನಕ್ಸಲ್ ಇದ್ದಾನೋ ಇಲ್ಲೊ ನಮಗೆ ಗೊತ್ತಿಲ್ಲ. ಅವನಿಗೂ ನಾನು ಮುಖ್ಯವಾಹಿನಿಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.
ರೈತರ ಪರ ಇಲ್ಲದ ಕೇಂದ್ರ ಸರ್ಕಾರ:
ದೆಹಲಿಯಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ರೈತರ ಪರ ಇಲ್ಲದ ಸರ್ಕಾರ. ರೈತರು ಎಂಎಸ್ ಪಿ ಕಾನೂನು ಮಾಡುವಂತೆ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ಜನರು ಸಾವೃಪ್ಪಿದ್ದಾರೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮಣಿಯುತ್ತಿಲ್ಲ. ಮಾನವೀಯತೆ ಇಲ್ಲದ ಸರ್ಕಾರ. ಸ್ವಲ್ಪನೂ ಬಗ್ಗದೇ ಇರುವ ಸರ್ಕಾರ ಎಂದು ಕಿಡಿಕಾರಿದರು.
ಅಮಿತ್ ಶಾ ಭೀಮಾ ಸಂಗಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಂಬೇಡ್ಕರ್ ಬಗ್ಗೆ ಯಾವ ರೀತಿ ಗೌರವ ಇಟ್ಟಿದ್ದಾರೆ ಎಂಬುದು ಅವರ ಹೇಳಿಕೆಯಿಂದ ಎಲ್ಲರಿಗೂ ಗೊತ್ತಾಗಿದೆ. ಇನ್ನೊಂದು ಕಡೆ ಅಂಬೇಡ್ಕರವಾಗಿ ಅಭಿಯಾನ ಮಾಡುತ್ತಿದ್ದಾರೆ. ಇದು ಹಾಸ್ಯಸ್ಪದ ಎಂದರು.
ಕಾಂಗ್ರೆಸ್ ಸಂವಿಧಾನ ಬರೆಸಿರುವುದು ಅಂಬೇಡ್ಕರ್ ಕೈಯಲ್ಲಿ. ಸಂವಿಧಾನದ ಗೌರವ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ. ವಾಜಪೇಯಿ ಕಾಲದಲ್ಲಿ ಸಂವಿಧಾನ ಬದಲಾವಣೆ ಮಾಡಲು ಹೊರಟರು, ಆರ್‌ಎಸ್‌ಎಸ್ ನವರು ಸಂವಿಧಾನ ವಿರೋಧ ಮಾಡಿದ್ದಾರೆ. ನಾವು ಅವರ ರೀತಿ ತೋರಿಸಿಕೊಳ್ಳುವ ಅಗತ್ಯ ಇಲ್ಲ. ನಾವು ಸಂವಿಧಾನ ರಕ್ಷಣೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರ ಜೊತೆ ಮಾತನಾಡಿದ್ದೇನೆ. ಪ್ರತಿ ತಿಂಗಳು 10 ಸಾವಿರ ಬರಲು ಮಾಡುತ್ತಿದ್ದೇವೆ. ಪ್ರತಿಭಟನೆ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ ಎಂದರು. ಪ್ರಿಯಾಂಕ ಖರ್ಗೆ ಆಪ್ತ ರಾಜು ಕಪನೂರು ಶರಣಾಗತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದರು.
ಚಾಮರಾಜನಗರದಲ್ಲಿ ಫೆ.15 ರಂದು ಕ್ಯಾಬಿನೆಟ್ ನಡೆಯುತ್ತದೆ. ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕೊಡುವ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಿಕೆಶಿ ವಿರುದ್ಧ ಸಿಡಿದ ಇಬ್ಬರು ಸಚಿವರು: 5 ವರ್ಷವೂ ಸಿದ್ದು ಸಿಎಂ ಆಗಿ ಮುಂದುವರಿಲೆಂದು ಅಗ್ರಹ!
ಮೈವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಎಂದಿದ್ದೆ
ಮೈಸೂರು ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ ಎಂದರು. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.