ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ(ಡಿ.27): ಮೈಸೂರಿನ ಕೆಆರ್‌ಎಸ್ ರಸ್ತೆಗೆ 'ಸಿದ್ದರಾಮಯ್ಯ ಆರೋಗ್ಯ ರಸ್ತೆ' ಎಂದು ಹೆಸರಿಡುವ ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಗುರುವಾರ ಜಮ್ಮು - ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ, ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದರು.
undefined
ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ
ಖಾದಿ ಉತ್ಸವ, ವಸ್ತು ಪ್ರದರ್ಶನಕ್ಕೆ ಸಿಎಂ ಚಾಲನೆ
ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ. ಹಿನ್ನೆಲೆಯಲ್ಲಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಹಾಗೂ ಇನ್ನಿತರೆ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವರಾದ ಎಚ್.ಕೆ.ಪಾಟೀಲ್, ಡಾ.ಎಚ್.ಸಿ. ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆ ಬ್ಬಾಳಕರ, ಎಂ.ಬಿ.ಪಾಟೀಲ, ಡಾ.ಎಂ.ಸಿ. ಸುಧಾ ಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕ ರ್ಆ.ವಿ. ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ಗಣ್ಯರೊಂದಿಗೆ ಸಿಎಂ ಹಾಗೂ ಡಿಸಿಎಂ ಬೆಳಗಾವಿ ನಗರದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನ ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಆಸ್ಥಿತ ವ್ಯಾಪಾರ ಮೇಳ-2024 ಉದ್ಘಾಟಿಸಿದರು.
ಸಿದ್ದು ಬಗ್ಗೆ ಸತ್ಯ ಹೇಳಿದ ಪ್ರತಾಪ್ ಸಿಂಹಗೆ ಕಾಫಿ ಕುಡಿಸುತ್ತೇನೆ: ಲಕ್ಷ್ಮಣ್
ಮೈಸೂರು: ಮಾಜಿ ಸಂಸದ ಪ್ರತಾಪ ಸಿಂಹ ಬಹಳ ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರ ಬಗ್ಗೆ ಬಗ್ಗೆ ಸತ್ಯ ಸತ್ಯ ಹೇಳಿದ್ದಾರೆ. ಅವರು ಸಿಕ್ಕರೆ ಕಾಫಿ ಕುಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಅವರು ಹೇಳಿದರು.
ಮೈಸೂರು ನಗರದ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ಮಾತನಾಡಿದ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಅವರ ಸಾಧನೆ ಬಗ್ಗೆ ಬಹಳ ಚೆನ್ನಾಗಿ ವಿವರಿಸಿದ್ದಾರೆ. ಇದು ಬಹಳ ಸಂತೋಷವಾಯಿತು ಎಂದು ಹೇಳಿದರು.
ಬಿಜೆಪಿ ಶಾಸಕ ಮುನಿರತ್ನಗೆ ಯಾರು ಮೊಟ್ಟೆ ಎಸೆದಿದ್ದಾರೆ ಅಂತ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ
ರಸ್ತೆಗೆ ಸಿದ್ದು ಹೆಸರು ಪ್ರಸ್ತಾಪ ಮಾಡಿದ್ದೇ ನಾನು: ಹರೀಶ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ಮಾರ್ಗ ಅಂತಾ ಹೆಸರು ಪ್ರಸ್ತಾಪಿಸಿದ್ದೆ ನಾನು, ನೂರಕ್ಕೆ ನೂರು ಸಿದ್ದರಾಮಯ್ಯ ಅವರ ಹೆಸರನ್ನು ಕೆ.ಆರ್.ಎಸ್. ರಸ್ತೆಗೆ ಇಡುತ್ತೇವೆ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದರು.
ನಗರದ ಕೆ.ಆರ್.ಎಸ್. ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನಿಡುವ ಜಟಾಪಟಿ ವಿಚಾರವಾಗಿ ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗದ ವಿಚಾರವಾಗಿ ಹೊಟ್ಟೆಕಿಚ್ಚಿನಿಂದ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಹಾರಾಜರ ನಂತರ ಮೈಸೂರಿಗೆ ಅತೀ ಹೆಚ್ಚು ಕೊಡುಗೆ ಕೊಟ್ಟವರು ಸಿದ್ದರಾಮಯ್ಯ ಎಂದರು.