ಉಪಕದನಕ್ಕೆ ಕಾಂಗ್ರೆಸ್‌ ರಣಕಹಳೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

By Kannadaprabha News  |  First Published Oct 15, 2024, 4:23 AM IST

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ರಾಜ್ಯದಲ್ಲೂ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕಟ್ಟಿಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಸಂಡೂರು ಉಪ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ


ಬಳ್ಳಾರಿ(ಅ.15): ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಯಾವುದೇ ಕ್ಷಣದಲ್ಲಿ ಉಪ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿರುವಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಸಂಡೂರಿನಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಸಿ ರಣಕಹಳೆ ಮೊಳಗಿಸಿದ್ದಾರೆ. 

ಸಂಡೂರಿನಲ್ಲಿ ಸೋಮವಾರ ಆಯೋಜಿ ಸಿದ್ದ ವಿವಿಧ ಅಭಿವೃದ್ಧಿಯೋಜನೆಗಳಿಗೆ ಚಾಲನೆ ನೀಡುವ ಸರ್ಕಾರಿ ಸಮಾರಂಭವು ಪ್ರತಿಪಕ್ಷ ಬಿಜೆಪಿ ವಿರುದ್ಧದ ವಾಗ್ದಾಳಿಗೆ ಸಾಕ್ಷಿಯಾಯಿತು. ರಾಜ್ಯ ಸರ್ಕಾರದ ಸಾಧನೆಯನ್ನು ಹೇಳುತ್ತಲೇ ಪ್ರತಿಪಕ್ಷ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಮತ್ತಿತರ ಕಾಂಗ್ರೆಸ್ ನಾಯಕರು ಉಪ ಚುನಾವಣೆಯ ಕದನಕ್ಕೆ ಈ ವೇದಿಕೆ ಮೂಲಕವೇ ರಣಕಹಳೆ ಮೊಳಗಿಸಿದರು. 

Latest Videos

undefined

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಮಾಜಿ ಸಚಿವ; ಎಲ್ಲರೂ ಲೈನ್‌ಗೆ ಬರ್ತಾರೆ ಕಾದು ನೋಡಿ ಎಂದ ಹೆಚ್‌ಡಿ ರೇವಣ್ಣ!

ಪಟ್ಟಣದ ವಿಶ್ವಾಸ್ ಯು.ಲಾಡ್ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ 500 ಮನೆಗಳ ಲೋಕಾರ್ಪಣೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಮಾತಿನ ಚಾಟಿ ಬೀಸಿದರು. 

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ರಾಜ್ಯದಲ್ಲೂ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕಟ್ಟಿಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಸಂಡೂರು ಉಪ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು. 

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ತುಕಾರಾಂ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೇರಿ ಸಮಾವೇಶಲ್ಲಿ ಪಾಲ್ಗೊಂಡಿದ್ದ ಎಲ್ಲ ನಾಯಕರು, ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಬರೀ ಸುಳ್ಳು ಹೇಳಿ ಜನರನ್ನು ವಂಚಿಸುವ ಬಿಜೆಪಿಯನ್ನು ಸೋಲಿಸಬೇಕು ಎಂದು ಆಗ್ರಹಿಸಿದರು.

click me!