ಸಂವಿಧಾನ ಬದಲಿಸಿದರೆ ಪರಿಸ್ಥಿತಿ ನೆಟ್ಟಗಿರಲ್ಲ: ಬಿಜೆಪಿಗೆ ಸಿಎಂ ಸಿದ್ದು ಎಚ್ಚರಿಕೆ

By Kannadaprabha News  |  First Published Apr 3, 2024, 6:15 AM IST

ನಾನು ಮುಖ್ಯಮಂತ್ರಿ ಆಗಿರಲು, ಮೋದಿ ಪ್ರಧಾನಿ ಆಗಿರಲು ನಮ್ಮ ಸಂವಿಧಾನ ಕಾರಣ. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಹೀಗಾಗಿ, ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 


ಮೈಸೂರು(ಏ.03):  ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಸಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ 45 ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರು ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡ ಬಳಿಕ ಮಾತನಾಡಿದರು.

Latest Videos

undefined

ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ; ಆದ್ರೂ ಜನ ಮೋದಿ ಮೋದಿ ಅಂತಾ ಕೂಗ್ತಾರೆ: ಎಚ್‌ಸಿ ಮಹದೇವಪ್ಪ ಕಿಡಿ

ನಾನು ಮುಖ್ಯಮಂತ್ರಿ ಆಗಿರಲು, ಮೋದಿ ಪ್ರಧಾನಿ ಆಗಿರಲು ನಮ್ಮ ಸಂವಿಧಾನ ಕಾರಣ. ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಹೀಗಾಗಿ, ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಪ್ರಸಾದ್ ಬೆಂಬಲಿಗರು ಸೇರ್ಪಡೆ: 

ಇದೇ ವೇಳೆ ಸಂಸದ ವಿ.ಶ್ರೀನಿವಾಸಪ್ರಸಾದ್ ಸಹೋದರ ವಿ.ರಾಮಸ್ವಾಮಿ, ಭರತ್ ರಾಮಸ್ವಾಮಿ, ಮುಖಂಡರಾದ ಶಿವಕುಮಾರ್, ಸಂತೋಷ್, ಸಿ.ಜಿ.ಶಿವಕುಮಾರ್, ಶಾಂತರಾಮ್ ಶೆಟ್ಟಿ, ಮದನ್, ಸಿದ್ದಲಿಂಗ, ವೆಂಕಟೇಶ್, ರವಿ, ನಾಗೇಶ್, ಸುರೇಶ್ ಕುಮಾರ್, ಶ್ರೀನಿವಾಸ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

click me!