ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಇನ್ನು ಕರ್ನಾಟಕದಲ್ಲಿ ದುಷ್ಟರ ಆಟ ನಡೆಯುವುದಿಲ್ಲ ಎನ್ನುವ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯ ಆಟ ನಡೆಯವುದಿಲ್ಲ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು (ಆ.16): ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಇನ್ನು ಕರ್ನಾಟಕದಲ್ಲಿ ದುಷ್ಟರ ಆಟ ನಡೆಯುವುದಿಲ್ಲ ಎನ್ನುವ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯ ಆಟ ನಡೆಯವುದಿಲ್ಲ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಕರ್ನಾಟಕದ ಜನರು ಒಡೆದಾಳುವವರ ವಿರುದ್ಧ ನಿಂತಿದ್ದಾರೆ. ಇವನಾರವ ಇವನಾರವ ಎನ್ನದೇ ಸಕಲರನ್ನು ಒಳಗೊಂಡ ಆಡಳಿತ ಮಾಡುವ ನಮ್ಮನ್ನು ಆರಿಸಿದ್ದಾರೆ. ಇಂದು ನಾನು ನೀಡುವ ಭರವಸೆಯಲ್ಲಿ ಮುಖ್ಯವಾದದ್ದು ಎಲ್ಲರನ್ನೂ ಒಳಗೊಂಡು ಬಾಳುವ, ಎಲ್ಲರ ಅಭಿವೃದ್ಧಿಯನ್ನು ಬಯಸುವ ಕರ್ನಾಟಕದ ಹೊಸ ಮಾದರಿ ಪ್ರಬಲಗೊಳಿಸುವುದು ಎಂದರು.
ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ಕಳೆದ ಕೆಲವು ವರ್ಷಗಳಿಂದ ದೇಶವು ವಿಪರೀತ ಆತಂಕಕ್ಕೆ ಒಳಗಾಗಿದೆ. ಸಮಾಜಗಳಲ್ಲಿ ವಿನಾಕಾರಣ ದ್ವೇಷ, ಹಿಂಸೆ, ಗುಮಾನಿ, ಶತ್ರುತ್ವ ಭಾವ, ಅಸಹನೆಗಳು ಬೆಳೆಯುತ್ತಿದ್ದು, ಕೆಟ್ಟದ್ದನ್ನು ಉತ್ಪಾದಿಸಿ ಅದಕ್ಕೆ ಎಲ್ಲರ ಒಪ್ಪಿಗೆ ಇದೆ ಎಂಬ ಭಾವನೆ ಸೃಷ್ಟಿಸಲು ಸಮಾಜದ ಕೆಲವು ವರ್ಗಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಈ ರೀತಿಯ ನಕಾರಾತ್ಮಕ ಧೋರಣೆಯನ್ನು ನಾವು ಹಿಮ್ಮೆಟ್ಟಿಸಲೇಬೇಕು ಎಂದು ಕರೆ ನೀಡಿದರು.
ಅನೈತಿಕ ದಬ್ಬಾಳಿಕೆ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡುವ, ಸಾಮರಸ್ಯ ಕದಡುವ ಯತ್ನ ಮತ್ತು ‘ಮತೀಯ ಗೂಂಡಾಗಿರಿ ಅಥವಾ ನೈತಿಕ ಪೊಲೀಸ್ ಗಿರಿ’ ಹೆಸರಿನಲ್ಲಿ ನಡೆಯುವ ‘ಅನೈತಿಕ ದಬ್ಬಾಳಿಕೆ’ಯನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಆಶಯವನ್ನು ಈಡೇರಿಸುವುದೇ ನಮ್ಮ ಉದ್ದೇಶವಾಗಿದೆ. ನಾಡ ಜನರು ವಿಶೇಷವಾಗಿ ಯುವಜನರು ಇಂತಹ ವಿಚ್ಛಿದ್ರಕಾರಿ ಶಕ್ತಿಗಳ ಪ್ರಚೋದನೆಗೆ ಒಳಗಾಗದೇ ಸಾಮರಸ್ಯ, ಸಹಭಬಾಳ್ವೆಯ ಮಹತ್ವವನ್ನು ಎತ್ತಿ ಹಿಡಿಬೇಕು ಎಂದು ಮನವಿ ಮಾಡಿದರು.
ಭ್ರಷ್ಟಾಚಾರ: ಭ್ರಷ್ಟಾಚಾರವು ಸಾಂಸ್ಥೀಕರಣಗೊಳ್ಳುವ ಮಟ್ಟಿಗೆ ಬೆಳೆದಿದೆ. ಇದನ್ನು ಹಂತ ಹಂತವಾಗಿ ನಿವಾರಿಸುವ ಕೆಲಸ ಮಾಡಲು ಪಣತೊಟ್ಟಿದ್ದೇವೆ. ಈಗಾಗಲೇ ಸರ್ಕಾರವು ಭ್ರಷ್ಟಾಚಾರವನ್ನು ನಿವಾರಿಸಲು ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿಂದೆ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಆದೇಶಗಳನ್ನು ಹೊರಡಿಸಿದೆ. ತಪ್ಪಿತಸ್ಥರ ವಿರುದ್ಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ದೃಢ ನಿಲುವು ತಾಳಿದೆ ಎಂದು ಘೋಷಿಸಿದರು.
ಮುಂದಿನ ಶೈಕ್ಷಣಿಕ ವರ್ಷಕ್ಕೆ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ
ದೇಶದ ಶೇ.70ರಷ್ಟುಸಂಪನ್ಮೂಲ ಶೇ.10ರಷ್ಟು ವ್ಯಕ್ತಿಗಳ ಬಳಿ ಇದೆ. ಸಂಪನ್ಮೂಲ ಕೆಲವೇ ಬಂಡವಾಳಶಾಹಿಗಳ ಬಳಿ ಸಂಗ್ರಹವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಸಾಧ್ಯವೇ? ಇದನ್ನು ಗಮನದಲ್ಲಿರಿಸಿಕೊಂಡು ಸಂಪತ್ತಿನ ಕ್ರೋಢೀಕರಣ ಹಾಗೂ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯವನ್ನು ನಾವು ಪಾಲಿಸುತ್ತಿದ್ದೇವೆ. ಹೀಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ