ಪ್ರಧಾನಿ ಮೋದಿ ಹಿಟ್ಲರ್ ರೀತಿ ಸರ್ವಾಧಿಕಾರಿ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Mar 23, 2024, 10:33 AM IST

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ಮಾದರಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. 


ಬೆಂಗಳೂರು (ಮಾ.23): ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ಮಾದರಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಕೇಂದ್ರದ ಕ್ರಮವನ್ನು ಬಲವಾಗಿ ಖಂಡಿಸಿದರು. 

ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಪ್ರಯೋಗಕ್ಕೆ ಮುಂದಾಗಿದೆ. ಕೇಂದ್ರದ ಈ ಧೋರಣೆಯನ್ನು ಕರ್ನಾಟಕ ಕಾಂಗ್ರೆಸ್ ಪಕ್ಷಖಂಡಿಸುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ನಡೆ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. 

Tap to resize

Latest Videos

ಧರ್ಮ, ದೇವರು ಹೆಸರಿನಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿ: ಮೃಣಾಲ್‌ ಹೆಬ್ಬಾಳಕರ್‌

ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದುಸರ್ವಾಧಿಕಾರಿಧೋರಣೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಹೇಳಿದರು. ಡಿಸಿಎಂ ಶಿವಕುಮಾರ್‌ ಮಾತನಾಡಿ, ನಾವು ರಾಜ್ಯದಲ್ಲಿ 78 ಲಕ್ಷಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರು. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಇನ್ನು ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ರು. ಸಂಗ್ರಹವಾಗಿತ್ತು. ನಾವು ಪಕ್ಷದ ಕಟ್ಟಡ, ಸಿಬ್ಬಂದಿ ವೇತನ ನೀಡಲು ಪರದಾಡುವ ಸಂದರ್ಭದಲ್ಲಿ ಎಐಸಿಸಿ ಖಾತೆಯಲ್ಲಿನ 290 ಕೋಟಿರು.ಗಳಷ್ಟು ಹಣವನ್ನು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಮೂಲಕ ಮುಟ್ಟುಗೋಲು ಹಾಕಿಸಿದೆ. 

ನಾವು ನ್ಯಾಯಾಧಿಕರಣಕ್ಕೆ ಹೋದರೂ ನಮಗೆ ಪರಿಹಾರ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಬಳಿ ನ್ಯಾಯ ಕೇಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಸುರ್ಜೇವಾಲಾ ಮಾತನಾಡಿ, ದೇಶದಲ್ಲಿ ಪ್ರಧಾನಿ ಮೋದಿ ಅವರು ಹಿಟ್ಲರ್ ಆಡಳಿತ ಮಾದರಿ ಸರ್ವಾಧಿಕಾರವನ್ನು ಹೇರುತ್ತಿದ್ದಾರೆ. ಸರ್ವಾಧಿಕಾರಿ ಮನಸ್ಸಿ ತಿಯ ಆಡಳಿತ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನುಂಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಚುನಾವಣಾ ವ್ಯವಸ್ಥೆ ಮೇಲಿನ ವ್ಯವಸ್ಥಿತ ದಾಳಿ ಎಂದರು. 

ಸ್ವಾರ್ಥಕ್ಕಾಗಿ ಬಿಜೆಪಿ ಜತೆ ಮೈತ್ರಿ ಮಾಡಿಲ್ಲ: ಶಾಸಕ ಎಚ್‌.ಡಿ.ರೇವಣ್ಣ

ಮೋದಿ ಮತ್ತು ಅವರ ಏಜೆನ್ಸಿಗಳು ಕಾಂಗ್ರೆಸ್ ಪಕ್ಷದ 4 ಬೇರೆ, ಬೇರೆ ಬ್ಯಾಂಕ್ ಗಳಲ್ಲಿನ11 ಖಾತೆಗಳನ್ನು ತಡೆಹಿಡಿದಿದ್ದಾರೆ. 2017-18ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ರೂಪದಲ್ಲಿ ಬಂದಿರುವ 199 ಕೋಟಿ ರು. ಗಳಲ್ಲಿ 14 ಲಕ್ಷ ರು. ನಗದು ರೂಪದಲ್ಲಿ ಪಡೆದಿದ್ದೇವೆ ಎಂಬುದು ಈ ಕ್ರಮಕ್ಕೆ ಕಾರಣ. 10 ಸಾವಿರ ದಂಡ ವಿಧಿಸಲು ಅವಕಾಶವಿರುವ ವಿಷಯವನ್ನು ಮುಂದಿ ಟ್ಟುಕೊಂಡು ಅಕ್ರಮ, ಬಲವಂತದ ಕ್ರಮ ದಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದಾರೆ ಎಂದರು.

click me!