
ಬೆಂಗಳೂರು/ಮೈಸೂರು (ಡಿ.24): ‘ಭಾರತವು ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ 74 ಬಾರಿ ವಿದೇಶ ಯಾತ್ರೆ ಮಾಡಿಕೊಂಡು ಮೋಜು ಮಾಡಿದ್ದಾರೆ ಎಂದು ಹೇಳಲು ಆಗುತ್ತದೆಯೇ?’ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿಶೇಷ ವಿಮಾನದ ಪ್ರಯಾಣವನ್ನು ಟೀಕಿಸಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬರ ಪರಿಹಾರಕ್ಕಾಗಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಇದಕ್ಕೆ ಮೊದಲು ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ ತಿರುಗೇಟು ನೀಡಿದ ಸಿಎಂ, ಮೋದಿ ಯಾವ ಫ್ಲೈಟ್ ನಲ್ಲಿ ಓಡಾಡುತ್ತಾರೆ? ಅವರದು ಐಷಾರಾಮಿ ವಿಮಾನ ಅಲ್ವಾ? ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತಹದ್ದು. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ತಿರುಗೇಟು ನೀಡಿದರು.
ಬಾಂಬೆಗೆ ಸ್ಪೆಷಲ್ ಪ್ಲೈಟ್‌ನಲ್ಲಿ ಹೋದ ಬಿಜೆಪಿಯವರು ದೇಶದ ಉದ್ದಾರಕ್ಕೆ ಹೋಗಿದ್ರಾ?: ಸಚಿವ ತಿಮ್ಮಾಪುರ
ಬಳಿಕ ಸರಣಿ ಟ್ವೀಟ್ ಮಾಡಿದ ಅವರು, ‘2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 74 ಬಾರಿ ವಿದೇಶ ಪ್ರವಾಸ ಮಾಡಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ ಅಧಿಕೃತ ಜಾಲತಾಣದ ಮಾಹಿತಿ ಪ್ರಕಾರವೇ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರುಪಾಯಿ. ಹೀಗಿರುವಾಗ ನನ್ನ ವಿಮಾನ ಪ್ರಯಾಣವನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ?’ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಮಾಡಿದ್ದೇನೆ. ಇದನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಮುಸ್ಲಿಂ ಪಾರ್ಟಿಯಾಗಿ ನಿರ್ಮಾಣಗೊಂಡಿದೆ : ಚಕ್ರವರ್ತಿ ಸೂಲಿಬೆಲೆ
ಬಿಜೆಪಿಯವರು ಮೋಜು ಮಾಡಿದ್ದು ಬಡಜನರ ತೆರಿಗೆ ಹಣ:\ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿ ಮಾಡಿದ್ದರು. ಇದಕ್ಕಾಗಿ ಬಿಜೆಪಿಯವರು ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದು ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.