ಮೋದಿಯಿಂದ ದೇಶದ ಆರ್ಥಿಕತೆ ಹಾಳು: ಸಿದ್ದರಾಮಯ್ಯ

Published : Jul 27, 2023, 01:40 AM IST
ಮೋದಿಯಿಂದ ದೇಶದ ಆರ್ಥಿಕತೆ ಹಾಳು: ಸಿದ್ದರಾಮಯ್ಯ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಆರ್ಥಿಕತೆ ಹಾಳು ಮಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಮಹಾ ಸಭಾದವರು ಸಮಾಜದ ಸಾಮರಸ್ಯಕ್ಕೆ ಭಂಗ ತರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.   

ಬೆಂಗಳೂರು (ಜು.27): ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಆರ್ಥಿಕತೆ ಹಾಳು ಮಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಮಹಾ ಸಭಾದವರು ಸಮಾಜದ ಸಾಮರಸ್ಯಕ್ಕೆ ಭಂಗ ತರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಮೂರು ದಿನಗಳ ‘ಬೆಹ್ತರ್‌ ಭಾರತ್‌ ಕಿ ಬುನಿಯಾದ್‌’(ಉತ್ತಮ ಭಾರತದ ಬುನಾದಿಗಾಗಿ) ಯುವ ರಾಷ್ಟ್ರೀಯ ಸಮಾವೇಶಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ 75 ವರ್ಷಗಳಿಂದ ದೇಶದ ಸಾಲ 53 ಲಕ್ಷ ಕೋಟಿ ರು. ಮಾತ್ರ ಇತ್ತು. ಆದರೆ ಮೋದಿ ಆಡಳಿತದ 9 ವರ್ಷದಲ್ಲಿ ಇದನ್ನು 170 ಲಕ್ಷ ಕೋಟಿ ರು.ಗೆ ಏರಿಸಿದ ಕೀರ್ತಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪರಿವಾರದ್ದಾಗಿದೆ. ಬೆಲೆ ಏರಿಕೆ ಮತ್ತು ಹಣದುಬ್ಬರವೇ ಇವರ ಸಾಧನೆಯಾಗಿದೆ. ಕಾರ್ಪೊರೇಟ್‌ ಕಂಪನಿಗಳ ಲಕ್ಷಾಂತರ ಕೋಟಿ ರು. ಸಾಲ ಮನ್ನಾ ಮಾಡಿ, ಬಡವರು ತಿನ್ನುವ ಮಂಡಕ್ಕಿ, ಮೊಸರಿನ ಮೇಲೆ ತೆರಿಗೆ ವಿಧಿಸಿದ್ದಾರೆ. ಇದನ್ನು ಯುವ ಸಮೂಹ ಬೀದಿ ಬೀದಿಯಲ್ಲಿ ಪ್ರಶ್ನಿಸಬೇಕು ಎಂದು ಕರೆ ನೀಡಿದರು.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿಕೆಶಿ ರೌಂಡ್ಸ್: ಪರಿಶೀಲನೆ

ರಾಷ್ಟ್ರ ರಾಜಕಾರಣದಲ್ಲಿ ಪರಿಣಾಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಕಾಂಗ್ರೆಸ್‌ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗಿತ್ತು. ಆಗ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ ಅವರು, ‘ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದ್ದರು. ಅದರಂತೆ ಕರ್ನಾಟಕದಲ್ಲಿ ಭ್ರಷ್ಟಬಿಜೆಪಿ ಸರ್ಕಾರವನ್ನು ಜನ ಕಿತ್ತು ಎಸೆದಿದ್ದಾರೆ. ಮುಂದೆ ಇದು ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯತ್ತ ಯುವಕರು ಗಮನ ಹರಿಸಬೇಕು. ನೆಹರು, ರಾಜಗೋಪಾಲಚಾರಿ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರ ನಾಯಕರು ಸ್ಥಳೀಯ ಸಂಸ್ಥೆಗಳಿಂದ ಕೆಲಸ ಆರಂಭಿಸಿ ಉನ್ನತ ಹುದ್ದೆ ಪಡೆದಿದ್ದಾರೆ. ಆದ್ದರಿಂದ ನೀವು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಜೊತೆ ದೃಢವಾಗಿ ನಿಲ್ಲಿ. ಪರಿಶ್ರಮಪಟ್ಟರೆ ಅಧಿಕಾರ ಹುಡುಕಿಕೊಂಡು ಬರುತ್ತದೆ ಎಂದು ಸಲಹೆ ನೀಡಿದರು.

ಬಿಜೆಪಿಯಿಂದ ಸುಳ್ಳಿನ ರಾಜಕಾರಣ: ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಮಾತನಾಡಿ, ಬಿಜೆಪಿಯು ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡು ಸುಳ್ಳಿನ ರಾಜಕಾರಣ ಮಾಡುತ್ತಿದೆ. ಸತ್ಯ ಮತ್ತು ಸುಳ್ಳಿನ ನಡುವಿನ ಸಮರದಲ್ಲಿ ಸತ್ಯಕ್ಕೇ ಜಯ ಲಭಿಸುತ್ತದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಪರ್ವ, ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಯುವಕರು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

‘ಭಾರತ್‌ ಜೋಡೋ’ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಯಾವ್ಯಾವ ರಾಜ್ಯಗಳಲ್ಲಿ ಸಂಚರಿಸಿದ್ದರೋ ಅದಕ್ಕೆ ಸಂಬಂಧಿಸಿದ ಸಾವಿರಾರು ಛಾಯಾಚಿತ್ರಗಳ ಪ್ರದರ್ಶನವನ್ನೂ ಪ್ರತ್ಯೇಕ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಸಚಿವ ಕೆ.ಜೆ.ಜಾಜ್‌ರ್‍, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್‌ ಅನ್ವರ್‌, ಯುವ ಕಾಂಗ್ರೆಸ್‌ ರಾಷ್ಟ್ರೀಯ ಉಸ್ತುವಾರಿ ಕೃಷ್ಣ ಅಲ್ಲವಾರು, ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ರಾಜ್ಯಾಧ್ಯಕ್ಷ ಮಹಮದ್‌ ಹ್ಯಾರಿಸ್‌ ನಲಪಾಡ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಎಲ್ಲಾ ರಾಜ್ಯಗಳ ಯುವ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕರ್ತರ ವಿರುದ್ಧ ಡಿಕೆಶಿ ಗರಂ: ಡಿ.ಕೆ.ಶಿವಕುಮಾರ್‌ ಅವರು ಭಾಷಣ ಮಾಡುತ್ತಿದ್ದಾಗ ಸಚಿನ್‌ ಪೈಲಟ್‌ ಅವರು ವೇದಿಕೆಯತ್ತ ಬರುತ್ತಿದ್ದರು. ಆಗ ಯುವ ಕಾಂಗ್ರೆಸ್‌ನ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಅವರೊಂದಿಗೆ ಫೋಟೋ, ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗಿದ್ದರಿಂದ ನೂಕು ನುಗ್ಗಲು, ಗದ್ದಲ ಉಂಟಾಯಿತು. ಈ ವೇಳೆ ವೇದಿಕೆಯ ಎಲ್‌ಇಡಿ ಪರದೆಯಲ್ಲಿ ಇದರ ವಿಡಿಯೋ ಪ್ರದರ್ಶಿಸಲಾಯಿತು. ಇದನ್ನು ನೋಡಿ ಸಿಟ್ಟಾದ ಶಿವಕುಮಾರ್‌, ‘ನಿಮಗೆ ಕಾಮನ್‌ ಸೆನ್ಸ್‌ ಇಲ್ಲವೇ? ಮೊದಲು ವಿಡಿಯೋ ಬಂದ್‌ ಮಾಡಿ’ ಎಂದು ಗರಂ ಆದರು. ನಂತರ ಗದ್ದಲ ಉಂಟು ಮಾಡಿದ ಕಾರ್ಯಕರ್ತರ ವಿರುದ್ಧವೂ ಸಿಟ್ಟಾದ ಶಿವಕುಮಾರ್‌, ಶಿಸ್ತು ಕಾಪಾಡಬೇಕು ಎಂದು ಸೂಚಿಸಿದರು.

ಶೀಘ್ರ ಹೊಸ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌: ಸಚಿವ ದಿನೇಶ್‌ ಗುಂಡೂರಾವ್‌

ಕರ್ನಾಟಕದ ಮತದಾರರು ದೇಶದ ರಾಜಕಾರಣ ಬದಲಿಸುವ ತೀರ್ಪು ನೀಡಿದ್ದಾರೆ. ಇದರಿಂದ ದೇಶದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಗೆಲುವು ಸಾಧಿಸಲಿದೆ.
-ಸಚಿನ್‌ ಪೈಲಟ್‌, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2026ರಲ್ಲೇ ಮಾತನಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯ ಹಿಂದಿನ ರಹಸ್ಯವೇನು?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ